Rain Alert : ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ.! ರೆಡ್ ಅಲರ್ಟ್ ಸಾಧ್ಯತೆ.!

Rain Alert : ನಮಸ್ಕಾರ ಸ್ನೇಹಿತರೇ, ಕರ್ನಾಟಕದ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈಗಾಗಲೇ ಹವಾಮಾನ ಇಲಾಖೆಯಿಂದ (IMD) ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?

WhatsApp Group Join Now

ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

WhatsApp Group Join Now

ಇದನ್ನೂ ಕೂಡ ಓದಿ : Drought Relief : ರೈತರ ಖಾತೆಗೆ ಮೂರನೇ ಹಂತದ ಬೆಳೆ ವಿಮೆ ಜಮಾ.! ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ.? ಬೇಗ ಚೆಕ್ ಮಾಡಿಕೊಳ್ಳಿ..!

ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಬೆಳಗಾವಿ, ಕಲಬುರಗಿ ಜಿಲ್ಲೆಗಳಿಗೂ ಕೂಡ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(India Meteorological Department) ತಿಳಿಸಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now

Leave a Reply