Rain Alert : ಕರ್ನಾಟಕದಲ್ಲಿ ನವೆಂಬರ್‌ 16ರ ವರೆಗೆ ಧಾರಕಾರ ಮಳೆ.! ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Rain Alert : ರಾಜ್ಯದಲ್ಲಿ ಮತ್ತೆ ಮಳೆ ಜೋರಾಗಲಿದೆ. ಮುಂದಿನ ಒಂದು ವಾರ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಳಾ ಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪಗೊಂಡಿದ್ದು, ಇದೀಗ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆ ಶುರುವಾಗುತ್ತಿದೆ.

ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನವೆಂಬರ್‌ 16ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಎಲ್ಲೆಲ್ಲಿ ಯಾವಾಗ ಮಳೆಯಾಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!

ರಾಜ್ಯದಲ್ಲಿ ಆರು ದಿನ ಮಳೆ :-

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಅವಧಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ. ಯಾವ ದಿನ, ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಇಳಿಕೆಯಾಗಿತ್ತು. ಇದೀಗ ಮಳೆಯ ಅಬ್ಬರ ಮತ್ತೆ ಜೋರಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನವೆಂಬರ್‌ 11ರ ನಂತರ ಹಾಗೂ ನವೆಂಬರ್‌ 16ರ ವರೆಗೆ ಭಾರೀ ಮಳೆಯಾಗಲಿದೆ. ಇಂದು ಮತ್ತು ನಾಳೆ ಬಹುತೇಕ ಸಾಧಾರಣವಾಗಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದಂತೆ ಸೋಮವಾರ ಬಹುತೇಕ ಒಣಹವೆ ಇರಲಿದೆ. ಆದರೆ, ಸಂಜೆಯ ನಂತರ ವಿವಿಧ ಜಿಲ್ಲೆಗಳಲ್ಲಿ ಮಳೆ ಚುರುಕಾಗಲಿದೆ. ಮಳೆ ಸಂಪೂರ್ಣ ವಿವರ ಇಲ್ಲಿದೆ.

Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

ನವೆಂಬರ್‌ 12 :- ರಾಜ್ಯದಲ್ಲಿ ಮಂಗಳವಾರ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು (ಉತ್ತರ ಮತ್ತು ದಕ್ಷಿಣ ಕರ್ನಾಟಕ) ಭಾಗದಲ್ಲಿ ಒಣಹವೆ ಮುಂದುವರಿಯಲಿದೆ.

ನವೆಂಬರ್‌ 13 :- ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅಲ್ಲದೇ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಲಿದೆ. ಇನ್ನು ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಳಿದಂತೆ ವಿವಿಧ ಜಿಲ್ಲೆಗಳಲ್ಲಿ ಒಣಹವೆ (ಸಾಧಾರಣ ಬಿಸಿಲು) ಇರಲಿದೆ.

ನವೆಂಬರ್‌ 14 :- ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.

Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?

ನವೆಂಬರ್‌ 15 :- ಕರಾವಳಿ ಹಾಗೂ ಒಳನಾಡಿನ ವಿವಿಧ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ನವೆಂಬರ್‌ 16 :- ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಸಾಧಾರಣ ಮಳೆ ಮುಂದುವರಿಯಲಿದೆ.

ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ: ರಾಜ್ಯದಲ್ಲಿ ಮುಂದಿನ ಒಂದು ವಾರದ ವರೆಗೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana

ಇನ್ನು ಬೆಂಗಳೂರಿನಲ್ಲೂ ಮಳೆ ಮುಂದುವರಿಯಲಿದೆ. ಗರಿಷ್ಠ ಉಷ್ಣಾಂಶವು 29 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply