Rain Alert : ರಾಜ್ಯದಲ್ಲಿ ಭಾರೀ ಮಳೆ – ಇನ್ನು 5 ದಿನ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

Spread the love

Rain Alert : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆಯಾಗಲಿದೆ. ಈಗಾಗಲೇ ಮೋಡ ಕವಿದ ವಾತಾವರಣ ಇದ್ದು ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡ ಜಿಲ್ಲೆಗೂ ಕೂಡ ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಲಾಗಿದೆ. ಕೆಲವೊಮ್ಮೆ ಭಾರೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

WhatsApp Group Join Now

ಇದನ್ನೂ ಕೂಡ ಓದಿ : Bara Parihara : ರೈತರಿಗೆ ಎಕರೆಗೆ ₹28,000 ಎರಡನೇ ಹಂತದ ಬೆಳೆವಿಮೆ ಹಣ ಬಿಡುಗಡೆ.! ಈ ಡೈರೆಕ್ಟ್ ಲಿಂಕ್ ಮೂಲಕ ಚೆಕ್ ಮಾಡಿ

ಬಾಗಲಕೋಟೆ, ಕೊಪ್ಪಳ, ಧಾರವಾಡ, ಹಾವೇರಿ, ಬೆಳಗಾವಿ, ಗದಗ ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಮಳೆ ಸಂಭವಿಸುವ ಸಾಧ್ಯತೆಯಿದೆ. ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗಬಹುದು.

WhatsApp Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply