Rain Update : ರಾಜ್ಯದಲ್ಲಿ ಫೆ.1 ರಿಂದ ಮಳೆ ಸಾಧ್ಯತೆ.? ಎಲ್ಲೆಲ್ಲಿ ಮಳೆ ಬೀಳಲಿದೆ.? ಸಂಪೂರ್ಣ ಮಾಹಿತಿ ಇಲ್ಲಿದೆ

Rain Update : ರಾಜ್ಯದಲ್ಲಿ ಫೆ.1ರಿಂದ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ. ಬೆಂಗಳೂರಿನಲ್ಲಿ 2ರವರೆಗೆ ಸಾಧಾರಣ ಮಳೆಯಾಗಲಿದೆ. ಫೆಬ್ರವರಿ ಮೊದಲ ವಾರದಿಂದ ಚಳಿ ಇಳಿಯುವ ಸಾಧ್ಯತೆ ಇದೆ. ಸದ್ಯ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಕುಸಿತ ಆಗಿದೆ , ಬೆಳಗಿನ ಜಾವ ದಟ್ಟ ಮಂಜು ಆವರಿಸುತ್ತಿದೆ. ಪೂರ್ವೋತ್ತರ ಮಾರುತಗಳು ಹಾದು ಹೋಗಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫೆ.1ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ ಬೀಳಲಿದೆ.?

ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡದಲ್ಲಿ ಫೆ.1 ರಿಂದ 2ರವರೆಗೆ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಫೆ.2ರಂದು ಸಾಧಾರಣ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ರಾಜ್ಯದ 13 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿಉಷ್ಣಾಂಶ ಕುಸಿತವಾಗಿದ್ದು, ಥಂಡಿ ವಾತಾವರಣ ಮುಂದುವರಿದಿದೆ. ಎಲ್ಲ ಜಿಲ್ಲೆಗಳಲ್ಲಿ ವಾಡಿಕೆಗಿಂತ 3 ರಿಂದ 5 ಡಿ. ಸೆ. ಉಷ್ಣಾಂಶ ಕುಸಿತವಾಗಿದೆ.

PM Kisan Yojana : ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ ಡೇಟ್‌ ಫಿಕ್ಸ್.! ರೈತರಿಗೆ ಸಿಹಿಸುದ್ಧಿ.!

ಹಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಆವರಿಸುತ್ತಿದೆ. ಫೆಬ್ರವರಿ ಮೊದಲ ವಾರದಿಂದ ಚಳಿ ಇಳಿಮುಖವಾಗುವ ಸಾಧ್ಯತೆಯಿದೆ. ಚಿಂತಾಮಣಿ, ಹಾಸನ, ಚಿಕ್ಕಮಗಳೂರು ಮತ್ತು ದಾವಣಗೆರೆಯಲ್ಲಿ ಸೋಮವಾರ ಸರಾಸರಿ 10 ಡಿ.ಸೆ., ಚಾಮರಾಜನಗರ 11, ಆಗುಂಬೆ 11, ಮಡಿಕೇರಿ 11.7, ಮಂಡ್ಯ 12, ಶಿವಮೊಗ್ಗ 12.2, ಮೈಸೂರು 12.4, ಬೀದರ್‌ 12.5, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 13 ಡಿ.ಸೆ.ಉಷ್ಣಾಂಶ ದಾಖಲಾಗಿದೆ.

ಕೇರಳ ಮತ್ತು ಮಾಹೆ, ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ರಾಯಲಸೀಮಾ ಮತ್ತು ಆಂಧ್ರಪ್ರದೇಶದ ಕರಾವಳಿ ಮತ್ತು ಯಾನಂನ ಪಕ್ಕದ ಪ್ರದೇಶಗಳಲ್ಲಿ ಜನವರಿ 27, 2025 ರಿಂದ ಈಶಾನ್ಯ ಮಾನ್ಸೂನ್ ಮಳೆ ನಿಂತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!

ಬೆಂಗಳೂರು ನಗರ ಮತ್ತು ನೆರೆಹೊರೆಯ ಸ್ಥಳೀಯ ಪ್ರದೇಶಗಳಿಗೆ ಮುನ್ಸೂಚನೆ

ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಭ್ರ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು/ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 15°C ಇರುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು/ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 15°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಈ ವಾರ ಕರ್ನಾಟಕ ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಳಾಖೆ ವರದಿ ನೀಡಿದೆ.

WhatsApp Group Join Now

Leave a Reply