ಖಾತೆ ಅಲ್ಲ ತೀವ್ರ ನೋವು, ಸಚಿವ ಸ್ಥಾನಕ್ಕೆ ರಾಜೀನಾಮೆ ಹಿಂದಿನ ಕಾರಣ ಬಹಿರಂಗಪಡಿಸಿದ ರಾಮಲಿಂಗಾ ರೆಡ್ಡಿ

Spread the love

ಡಿ.ಕೆ ಶಿವಕುಮಾರ್ ಸರ್ಕಾರದಲ್ಲಿ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ತಮ್ಮ ರಾಜೀನಾಮೆಗೆ ಖಾತೆ ಕಾರಣವಲ್ಲ, ನೋವು ಎಂದಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಆಡಳಿತ ಆರಂಭಿಸಿದ್ದಾರೆ.

ನಿನ್ನೆಯಷ್ಟೇ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮಂತ್ರಿಗಳು ತಮ್ಮ ತಮ್ಮ ಇಲಾಖೆ ಅಧಿಕಾರಿಗಳ ಜೊತೆ ಮೀಟಿಂಗ್ ಆರಂಭಿಸಿದ್ರೆ, ಇತ್ತ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿ ಡಿಕೆ ಶಿವಕುಮಾರ್ ಹಾಗೂ ಹೊಸ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ್ದಾರೆ.

ನಾನು ಯಾರ ಬಳಿಯೂ ಮಂತ್ರಿ ಮಾಡಿ ಎಂದು ಕೇಳಿರಲಿಲ್ಲ. ಹೈಕಮಾಂಡ್ ಭೇಟಿ ಮಾಡಿಲ್ಲ, ಡಿಕೆ ಶಿವಕುಮಾರ್ ಬಳಿ ನಾನು ಮಂತ್ರಿ ಎಂದಿ ಕೇಳಿಲ್ಲ. ಆದರೆ ಇದೀಗ ಎರಡನೇ ಬಾರಿ ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುತ್ತೇನೆ ಎಂದು ಎರಡು ಬಾರಿ ಹೀಗೆ ಬೇರೆ ಖಾತೆ ನೀಡಿದ್ದಾರೆ. ಇದು ನೋವು ತಂದಿದೆ ಎಂದಿದ್ದಾರೆ.

ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿ ಕಳುಹಿಸಿದ್ದಾರೆ. ಬೆಂಗಳೂರು ನಗರಾಭಿವೃದ್ದಿ ಖಾತೆ ನೀಡುವುದಾಗಿ ಹೇಳಿ ಬಳಿಕ ಮಾತು ತಪ್ಪಿದಾಗ ನೋವಾಗಿದೆ. ಹೀಗಾಗಿ ಈ ಕುರಿತು ನಡೆಸಿದ ಮಾತುಕತೆಯಲ್ಲಿ ರಾಮಲಿಂಗಾ ರೆಡ್ಡಿ ಅವರಿಗೆ ತೀವ್ರ ನೋವುಂಟಾಗಿರುವುದು ಸ್ಪಷ್ಟವಾಗಿದೆ. ಇದೇ ನೋವು, ಬೇಸರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಖಾತೆ ಹಂಚಿಕೆ, ಬದಲಾವಣೆ ನಡುವೆ ಏನೆಲ್ಲಾ ಆಗಿದೆ ಎಂದು ಹೇಳಲು ಆಗಲ್ಲ. ಹೈಕಮಾಂಡ್ ಜೊತೆ ಮಾತುಕತೆ, ಮನವೊಲಿಕೆ ಮಾತಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ನನ್ನ ರಾಜೀನಾಮೆ ನನ್ನ ಕುಟುಂಬಕ್ಕೆ ಗೊತ್ತಿಲ್ಲ. ಯಾರ ಜೊತೆಗೆ ಚರ್ಚಿಸುವ ಅಗತ್ಯವಿಲ್ಲ ಎಂದಿದ್ದಾರೆ.

ಈಗೀನ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ ಸಂಸದ ಸುರೇಶ್ ಅವರು ನಮ್ಮ ಮನೆಗೆ ಬಂದಿದ್ದರು. ಮುಂದೆ ನಾನೇ ಸಿಎಂ ಆಗ್ತೇನೆ ನಿಂಗೆ ಬೆಂಗಳೂರು ನಗರಾಭಿವೃದ್ಧಿ ಕೊಡುತ್ತೇನೆ ಎಂದಿದ್ದರು. ಆದರೆ ಮಾತು ಕೊಟ್ಟು ಪದೇ ಪದೇ ಈ ರೀತಿ ಮಾತು ಬದಲಾಯಿಸಿದಾಗ ಬೇಸರ ಆಗುತ್ತದೆ ಎಂದಿದ್ದಾರೆ.

ನನಗೆ ತಮ್ಮ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದಕ್ಕೆ ತಮಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನನ್ನ ಧನ್ಯವಾದಗಳು. ನಾನು ನನ್ನ ಆತ್ಮಸಾಕ್ಷಿ ವಿರುದ್ದವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಕೋರುತ್ತೇನೆ.ನಾನು ಶಾಸಕನಾಗಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ ಎಂದು ಉಲ್ಲೇಖಿಸಿದ್ದಾರೆ.

WhatsApp Group Join Now

Spread the love

Leave a Reply