Ration Card : ಪಡಿತರ ಚೀಟಿದಾರರೇ ತಪ್ಪದೇ `ಇ-ಕೆವೈಸಿ’ ಮಾಡಿಕೊಳ್ಳಿ : ಇಲ್ಲದಿದ್ರೆ ಡಿಸೆಂಬರ್ ನಿಂದ ಸಿಗಲ್ಲ `ರೇಷನ್’! ಸಂಪೂರ್ಣ ಮಾಹಿತಿ

Ration Card : ನಮಸ್ಕಾರ ಸ್ನೇಹಿತರೇ, ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಇದನ್ನೂ ಕೂಡ ಓದಿ : Nekar Samman Scheme : ಇಂತಹವರಿಗೆ ರಾಜ್ಯ ಸರ್ಕಾರದಿಂದ ಸಿಗಲಿದೆ ₹5,000/- ಹಣ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?

ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹಾಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಬೇಕಾದ ದಾಖಲೆಗಳೇನು.?

• ಪಡಿತರ ಚೀಟಿಯ ಒರಿಜಿನಲ್ ಪ್ರತಿ
• ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
• ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
• ಬ್ಯಾಂಕ್ ಪಾಸ್‌ಬುಕ್‌ನ ಪ್ರತಿ
• ಕುಟುಂಬದ ಯಜಮಾನನ ಎರಡು ಪಾಸ್‌ಪೋರ್ಟ್ ಅಳತೆಯ ಪೋಟೋ

ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ನ್ನು ಆನ್ ಲೈನ್ ನಲ್ಲಿ ಈ ರೀತಿ ಲಿಂಕ್ ಮಾಡಿ :-

ನಿಮ್ಮ ರಾಜ್ಯದ ಅಧಿಕೃತ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ಗೆ ಭೇಟಿ ನೀಡಿ. ಸಕ್ರಿಯ ಕಾರ್ಡ್ನೊಂದಿಗೆ ಆಧಾರ್ ಲಿಂಕ್ ಆಯ್ಕೆ ಮಾಡಿ. ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ ಮತ್ತು ನಂತರ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ. ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ಮುಂದುವರಿಯಿರಿ / ಸಲ್ಲಿಸಿ ಬಟನ್ ಆಯ್ಕೆ ಮಾಡಿ.

ನೀವು ಈಗ ನಿಮ್ಮ ಮೊಬೈಲ್ ಫೋನ್ಗೆ ಒಟಿಪಿಯನ್ನು ಸ್ವೀಕರಿಸುತ್ತೀರಿ. ಆಧಾರ್ ಪಡಿತರ ಲಿಂಕ್ ಪುಟದಲ್ಲಿ ಒಟಿಪಿಯನ್ನು ನಮೂದಿಸಿ, ಮತ್ತು ಅದಕ್ಕಾಗಿ ನಿಮ್ಮ ವಿನಂತಿಯನ್ನು ಈಗ ಸಲ್ಲಿಸಲಾಗಿದೆ.

Leave a Reply