ಐಪಿಎಲ್ 2025ರ ಮೊದಲ ಕ್ವಾಲಿಫೈಯನ್ ಪಂದ್ಯ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ. ಈ ಹೈ ವೋಲ್ಟೇಜ್ ಕದನ ಮೇ 29ರಂದು ಚಂಡೀಗಢದ ಮುಲ್ಲನ್‌ಪುರ್‌ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ನಡುವೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಆತಂಕವೊಂದು ಎದುರಾಗಿದೆ.
ಭಾರತ-ಪಾಕಿಸ್ತಾನ ನಡುವೆ ಯುದ್ಧ ಬಿಕ್ಕಟ್ಟು ಕಾರಣ ಆಟಗಾರರು, ಅಭಿಮಾನಿಗಳು ಹಿತದೃಷ್ಟಿಯಿಂದ ಪ್ರಾಂಚೈಸಿಗಳ ಮನವಿ ಮೇರೆಗೆ ಐಪಿಎಲ್ 2025ರ ಟೂರ್ನಿಯನ್ನು ರದ್ದುಪಡಿಸಿ ಒಂದು ವಾರಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಬಳಿಕ ಎರಡು ದೇಶಗಳ ನಡುವೆ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ಹೊಸ ವೇಳಾಪಟ್ಟಿಯಂತೆ ಮೇ 17ರಿಂದ ಟೂರ್ನಿಯನ್ನು ಮತ್ತೆ ಆರಂಭಿಸಲಾಯಿತು. ಇದೀಗ ಕ್ವಾಲಿಫೈಯರ್ ಹಂತದವರೆಗೂ ಬಂದು ತಲುಪಿದ್ದು, ಕೆಲವೇ ದಿನಗಳಲ್ಲಿ ಮುಕ್ತಾಯ ಕೂಡ ಆಗಲಿದೆ.
ಅದರಲ್ಲೂ ಈ ಸೀಸನ್ ಆರಂಭದಿಂದಲೂ ರಾಯಲ್ ಚಾಲೆಂಂಜರ್ಸ್ ಬೆಂಗಳೂರು ತಂಡವು ಬ್ಯಾಟಿಂಗ್, ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರುತ್ತಾ ಬಂದಿದೆ. ಅಲ್ಲದೆ, ಎಲ್‌ಎಸ್‌ಜಿ ವಿರುದ್ಧ ಭರ್ಜರಿಯಾಗಿ ಗೆದ್ದು ಬೀಗುವ ಮೂಲಕ ಕ್ವಾಲಿಫೈಯರ್‌ಗೆ ಭರ್ಜರಿ ಎಂಟ್ರಿ ಕೊಟ್ಟಿದ್ದು, ಮೊದಲ ಕ್ವಾಲಿಫೈಯರ್ ಪಂದ್ಯವನ್ನು ಪಂಜಾಬ್ ಕಿಂಗ್ಸ್ ವಿರುದ್ಧ ನಾಳೆ ಅಂದರೆ ಮೇ 29ರಂದು ಆಡಲಿದೆ. ಈ ನಡುವೆಯೇ ಆತಂಕವೊಂದು ಎದುರಾಗಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಈಗಾಗಲೇ ಮುಂಗಾರು ಕೂಡ ಪ್ರವೇಶ, ಮತ್ತೊಂದೆಡೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ದೇಶದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಹಲವೆಡೆ ಧಾರಾಕಾರ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಎಂದು ತಿಳಿಸಿದೆ. ಕರ್ನಾಟಕ, ಕೇರಳ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯ ಪ್ರದೇಶದ ಚಂಡೀಗಢ ಸೇರಿದಂತೆ ಹಲವು ರಾಜ್ಯಗಳಲ್ಲಿ ರಣಭೀಕರ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.
ಒಂದು ವೇಳೆ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮೇ 29ರಂದು ಚಂಡೀಗಢ ರಾಜ್ಯಾದ್ಯಂತ ಮಳೆಯಾದರೆ, ಆರ್‌ಸಿಬಿ-ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ಅಡೆತಡೆಯಾಗುವ ಸಾಧ್ಯತೆಯಿದೆ. ಈಗಾಗಲೇ ದಕ್ಷಿಣ ಭಾಗದ ಬಹುತೇಕ ಭಾಗಗಳಲ್ಲಿ ಮುಂಗಾರು ಎಂಟ್ರಿ ಕೊಟ್ಟ ಪರಿಣಾಮ ಭಾರೀ ಮಳೆ ಮುಂದುವರೆದಿದೆ. ಇದಕ್ಕೂ ಮುಂಚೆ ಈ ಭಾಗದ ಹವಾಮಾನ ಪರಿಸ್ಥಿಯ ಗಮನದಲ್ಲಿಟ್ಟುಕೊಂಡೇ ಬಿಸಿಸಿಐ ಉಳಿದ ಎಲ್ಲಾ ಪಂದ್ಯಗಳನ್ನು ಲಕ್ನೋ, ಅಹಮದಾಬಾದ್, ಚಂಡಿಗಢದಲ್ಲಿ ಆಡಿಸಲು ತೀರ್ಮಾ ಮಾಡಿತು.
ಈ ನಡುವೆಯೇ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ದೇಶದ ಬಹುತೇಕ ರಾಜ್ಯಗಳಿಗೆ ಮಳೆರಾಯನ ಆರ್ಭಟ ಮುಂದುವರೆದಿದೆ. ಅಲ್ಲದೆ, ದಿನದಿಂದ ದಿನಕ್ಕೆ ಬೇರೆ ಬೇರೆ ಭಾಗಗಳಿಗೂ ವ್ಯಾಪಿಸುತ್ತಲೇ ಇದೆ. ಆದ್ದರಿಂದ ಇದೀಗ ನಾಳೆಯ ಪಂದ್ಯಕ್ಕೆ ಆತಂಕ ಎದುರಾಗಿದೆ.
ಅದರಲ್ಲೂ ಈ ಬಾರಿ ಆರಂಭದಿಂದಲೂ ಉತ್ತಮ ಪ್ರದರ್ಶನ ತೋರುತ್ತಾ ಬಂದಿರುವ ಆರ್‌ಸಿಬಿ ತಂಡವು ಕ್ವಾಲಿಫೈಯರ್ ತಲುಪಿದ್ದು, ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಪೈನಲ್‌ಗೆ ನೇರವಾಗಿ ಪ್ರವೇಶಿಸುವ ಭರವಸೆಯನ್ನು ಇಟ್ಟುಕೊಂಡಿದೆ. ಆದ್ದರಿಂದ ಈ ಪಂದ್ಯಕ್ಕೆ ಮಳೆ ಅಡ್ಡಿಯಾಗದೇ ಆರ್‌ಸಿಬಿ ಗೆಲ್ಲಲಿ ಎಂದು ಅಪಾರ ಪ್ರಮಾಣದ ಅಭಿಮಾನಿಗಳು ದೇವರಲ್ಲಿ ಬೇಡಿಕೊಳ್ಳುತ್ತಿದ್ದಾರೆ. ನಮ್ಮೆಲ್ಲರ ಆಶಯವೂ ಕೂಡ ಅದೇ ಆಗಿದೆ. ಯಾವುದೇ ಅಡೆತಡೆಯಾಗದೇ, ಆರ್‌ಸಿಬಿ ಈ ಬಾರಿ ಕಪ್ ಗೆದ್ದು ಇತಿಹಾಸ ನಿರ್ಮಿಸಲಿ ಎನ್ನುವುದೇ ನಮ್ಮ ಆಶಯ.
ಇದುವರೆಗೂ ಆಡಿರುವ 17 ಸೀಸನ್‌ಗಳಲ್ಲೂ ಆರ್‌ಸಿಬಿ ಒಂದೇ ಒಂದು ಟ್ರೋಫಿ ಗೆದ್ದಿಲ್ಲ. ಹಾಗಂತ ಅಭಿಮಾನಿಗಳ ಸಂಖ್ಯೆಯೇನೂ ಕಡಿಮೆಯಾಗಿಲ್ಲ, ಬದಲಾಗಿ ಹೆಚ್ಚಾಗುತ್ತಲಿದೆ. ಇನ್ನೂ ಈ ಬಾರಿ ಕಪ್ ಗೆಲ್ಲುವ ಎಲ್ಲಾ ಲಕ್ಷಣಗಳು ಎದ್ದು ಕಾಣುತ್ತಿವೆ. ಅಷ್ಟರ ಮಟ್ಟಿಗೆ ರಾಯಲ್ ತಂಡ ಉತ್ತಮ ಪ್ರದರ್ಶನ ತೋರುತ್ತಾ ಬಲಿಷ್ಠ ತಂಡಗಳನ್ನು ಬಗ್ಗುಬಡಿದು ಕ್ವಾಲಿಫೈಯರ್ ಹಂತದವರೆಗೂ ಪ್ರವೇಶಿಸಿದೆ.
ಮೊದಲ ಕ್ವಾಲಿಫೈಯರ್ ಪಂದ್ಯ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಮೇ 29ರಂದು ನಡೆಯಲಿದ್ದು, ಈ ಹೈವೋಲ್ಟೇಜ್ ಪಂದ್ಯದಲ್ಲಿ ಗೆದ್ದು ಫೈನಲ್ ಪ್ರವೇಶ ಮಾಡಲೇಬೇಕೆನ್ನುವ ಹಠ ಆರ್‌ಸಿಬಿಯದ್ದಾಗಿದೆ. ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾಗಿ ಎರಡು ತಂಡಗಳಿಗೆ ತಲಾ ಒಂದೊಂದು ಅಂಕ ಸಿಕ್ಕರೆ ಆಗ ಫೈನಲ್ ಭವಿಷ್ಯ ರನ್ ರೇಟ್ ಮೇಲೆ ನಿಂತಿರುತ್ತದೆ. ಈ ವೇಳೆ ಸೋತ ತಂಡಕ್ಕೆ ಕ್ವಾಲಿಫೈಯರ್ 2ನೇ ಪಂದ್ಯ ಆಡುವ ಅವಕಾಶ ಇರುತ್ತದೆ.
ಏನಿದು ಕ್ವಾಲಿಫೈಯರ್ ಮೊದಲ ಪಂದ್ಯ.?
ಲೀಗ್ ಹಂತದ ಪಂದ್ಯಗಳ ಮುಕ್ತಾಯದಲ್ಲಿ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿ ಬರುವ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವನ್ನು ಆಡಲಿದೆ. ಇದರಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್‌ಗೆ ಪ್ರವೇಶ ಪಡೆಯಲಿದೆ. ಸೋಲನುಭವಿಸಿದ ತಂಡ ದ್ವಿತೀಯ ಕ್ವಾಲಿಫೈಯರ್ ಪಂದ್ಯ ಆಡಲು ಅವಕಾಶ ಇರಲಿದೆ.
ಹಾಗೆಯೇ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಈ ಸ್ಥಾನಗಳನ್ನು ಗಿಟ್ಟಿಸಿಕೊಂಡು ನಾಳೆ ಅಂದರೆ ಮೇ 29ರಂದು ಮೊದಲ ಕ್ವಾಲಿಫೈಯರ್ ಪಂದ್ಯ ಆಡಲಿದ್ದು, ಯಾವ ತಂಡ ಗೆಲ್ಲುತ್ತದೆಯೋ ಆ ತಂಡ ನೇರವಾಗಿ ಫೈನಲ್ ಪ್ರವೇಶ ಮಾಡಲಿದೆ.
ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡ ದ್ವಿತೀಯ ಕ್ವಾಲಿಫೈಯರ್ಗೆ ಅರ್ಹತೆ ಪಡೆಯಲಿದ್ದು, ಸೋತ ತಂಡವು ಹೊರಬೀಳಲಿದೆ. ಹಾಗೆಯೇ ಮೊದಲ ಕ್ವಾಲಿಫೈಯರ್ನಲ್ಲಿ ಸೋತ ತಂಡ ಹಾಗೂ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡಗಳು ದ್ವಿತೀಯ ಕ್ವಾಲಿಫೈಯರ್ನಲ್ಲಿ ಸೆಣೆಸಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ಗೆ ಅರ್ಹತೆ ಪಡೆಯಲಿದೆ.
ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ಗೆ ಪ್ರವೇಶಿಸಿದರೆ, ಸೋತ ತಂಡವು ಎಲಿಮಿನೇಟರ್ ಪಂದ್ಯದ ಫಲಿತಾಂಶಕ್ಕಾಗಿ ಕಾಯಬೇಕು. ಇಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡ ದ್ವಿತೀಯ ಕ್ವಾಲಿಫೈಯರ್ ಪಂದ್ಯ ಆಡಲು ಅರ್ಹತೆ ಪಡೆಯಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ಗೆ ಪ್ರವೇಶ ಮಾಡಲಿದೆ. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡ ಹಾಗೂ ದ್ವಿತೀಯ ಕ್ವಾಲಿಫೈಯರ್ನಲ್ಲಿ ಗೆದ್ದ ತಂಡ ಫೈನಲ್ನಲ್ಲಿ ಮುಖಾಮುಖಿ ಆಗಲಿವೆ.
ಇದೀಗ ಸದ್ಯ ಅಂಕಪಟ್ಟಿಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಆರ್‌ಸಿಬಿ ತಂಡಗಳು ಇದ್ದು, ಇವು ಕ್ವಾಲಿಫೈಯರ್ ಪಂದ್ಯಗಳನ್ನು ಆಡಲು ಅರ್ಹತೆ ಪಡೆದಿವೆ. ಇನ್ನು ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರು ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನಾಡಲಿವೆ.

ಆರ್‌ಸಿಬಿ-ಪಂಜಾಬ್ ಕಿಂಗ್ಸ್ ಕ್ವಾಲಿಫೈಯರ್ ಪಂದ್ಯ ರದ್ದು ಸಾಧ್ಯತೆ.! ಪಂದ್ಯ ರದ್ದಾದರೆ ಆರ್ ಸಿಬಿ ಫೈನಲ್ ಗೆ ಹೋಗುತ್ತಾ.?
WhatsApp Group
Join Now