ರಾತ್ರಿ ಪ್ರಿಯಕರನೊಂದಿಗೆ ಹೋಟೆಲ್‌ಗೆ ಬಂದಿದ್ದ ರೇಣುಕಾ, ಬೆಳಗ್ಗೆ ಹೆಣವಾದಳು.! ಆ ರಾತ್ರಿ ನಡೆದಿದ್ದೇನು.?

Spread the love

ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ 26 ವರ್ಷದ ಯುವತಿಯ ಸಂಶಯಾಸ್ಪದ ಸಾವು ಇದೀಗ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪ್ರಿಯಕರನೊಂದಿಗೆ ಹೋಟೆಲ್‌ಗೆ ಬಂದಿದ್ದ ಯುವತಿ ಮರುದಿನ ಬೆಳಗ್ಗೆ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಘಟನೆಯ ಸಂಪೂರ್ಣ ವಿವರ:

ಮೃತ ಯುವತಿಯನ್ನು ರೇಣುಕಾ ಎಂದು ಗುರುತಿಸಲಾಗಿದ್ದು, ಈಕೆ ಹೈದರಾಬಾದ್‌ನ ಪಬ್ ಒಂದರಲ್ಲಿ ಡ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದಳು. 8 ವರ್ಷಗಳ ಹಿಂದೆ ಮದುವೆಯಾಗಿದ್ದ ರೇಣುಕಾಗೆ 7 ವರ್ಷದ ಮಗನಿದ್ದಾನೆ. ಆದರೆ, ಪತಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಿ ಆತನಿಂದ ದೂರ ಸರಿದಿದ್ದ ರೇಣುಕಾ, ಕಳೆದ ಆರು ತಿಂಗಳಿನಿಂದ ಫಾರೂಕ್ ಎಂಬಾತನೊಂದಿಗೆ ಪ್ರೇಮ ಸಂಬಂಧ ಹೊಂದಿದ್ದಳು.

ಗುರುವಾರ ರಾತ್ರಿ ರೇಣುಕಾ ಮತ್ತು ಫಾರೂಕ್ ಇಬ್ಬರೂ ಲಂಗರ್ ಹೌಸ್ ಪೊಲೀಸ್ ಠಾಣಾ ವ್ಯಾಪ್ತಿಯ ‘ವಿ ಗ್ರಾಂಡ್’ ಹೋಟೆಲ್‌ಗೆ ಬಂದು ರೂಮ್ ಬುಕ್ ಮಾಡಿದ್ದರು. ಅಲ್ಲಿ ಇಬ್ಬರೂ ಜೊತೆಯಾಗಿ ಊಟ ಮಾಡಿದ್ದರು. ಆದರೆ, ಮರುದಿನ ಬೆಳಗ್ಗೆ ರೇಣುಕಾ ಹೋಟೆಲ್ ಕೊಠಡಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

ಕೊಲೆ ಆರೋಪ ಮಾಡಿದ ಕುಟುಂಬಸ್ಥರು:

ರೇಣುಕಾ ಸಾವು ಆತ್ಮಹತ್ಯೆಯಲ್ಲ, ಅದೊಂದು ಕೊಲೆ ಎಂದು ಆಕೆಯ ಪೋಷಕರು ಮತ್ತು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಫಾರೂಕ್‌ನೇ ರೇಣುಕಾಳನ್ನು ಹತ್ಯೆ ಮಾಡಿದ್ದಾನೆ ಎಂದು ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿ ಫಾರೂಕ್‌ಗೆ ಈಗಾಗಲೇ ಮದುವೆಯಾಗಿದ್ದು, ಆತನಿಗೆ ಮೂವರು ಮಕ್ಕಳಿದ್ದಾರೆ ಎನ್ನಲಾಗಿದೆ. ಈ ವಿಷಯ ರೇಣುಕಾಗೆ ತಿಳಿದಿತ್ತೇ ಅಥವಾ ಇವರಿಬ್ಬರ ನಡುವೆ ಇದೇ ವಿಚಾರವಾಗಿ ಗಲಾಟೆ ನಡೆದಿತ್ತೇ ಎಂಬ ನಿಟ್ಟಿನಲ್ಲಿಯೂ ತನಿಖೆ ನಡೆಯುತ್ತಿದೆ.

ತನಿಖೆ ಕೈಗೆತ್ತಿಕೊಂಡ ಪೊಲೀಸರು:

ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಲಂಗರ್ ಹೌಸ್ ಪೊಲೀಸರು ಹೋಟೆಲ್‌ಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ರೇಣುಕಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಪೊಲೀಸರು ಸಂಶಯಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಿಯಕರ ಫಾರೂಕ್‌ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ರೇಣುಕಾ ಸಾವಿನ ಹಿಂದಿನ ಅಸಲಿ ಸತ್ಯ ಹೊರಬರಬೇಕಿದೆ.

WhatsApp Group Join Now

Spread the love

Leave a Reply