ನಾನು ಸತ್ತರೆ ನಿನ್ನ ಯಾರು ನೋಡಿಕೊಳ್ಳುತ್ತಾರೆ : ಪತ್ನಿಯನ್ನ ಕೊಂದ ಇಸ್ರೋ ನಿವೃತ್ತ ನೌಕರ

Spread the love

ಇಸ್ರೋ ಸಂಸ್ಥೆ ನಿವೃತ್ತ ನೌಕರನಿಂದ ಉಸಿರುಗಟ್ಟಿಸಿ ಪತ್ನಿಯ ಕೊಲೆ (murder) ಮಾಡಿರುವಂತಹ ಘಟನೆ ಬೆಂಗಳೂರಿನ ಆವಲಹಳ್ಳಿಯ ವಿರ್ಟುಸೊ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಪತ್ನಿ (wife) ಸಧ್ಯಾರ ಉಸಿರುಗಟ್ಟಿಸಿ ಪತಿ ನಾಗಲೇಶ್ವರ ರಾವ್ರಿಂದ ಕೊಲೆ ಮಾಡಲಾಗಿದೆ.

ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಆಲವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ನಾಗಲೇಶ್ವರ ರಾವ್, ಇಸ್ರೋ ಸಂಸ್ಥೆಯ ನಿವೃತ್ತ ನೌಕರರು. ಪತ್ನಿ ಸಧ್ಯಾ ಅವರೊಂದಿಗೆ ವಿರ್ಟುಸೊ ಅಪಾರ್ಟ್ಮೆಂಟ್ನಲ್ಲಿ ನೆಲೆಸಿದ್ದರು. ಪ್ರಾಥಮಿಕ ವಿಚಾರಣೆ ವೇಳೆ ನಾನು ಸತ್ತರೆ ಪತ್ನಿಯನ್ನು ಯಾರು ನೋಡುಕೊಳ್ಳುತ್ತಾರೆ, ಯಾರೂ ಸಂಬಂಧಿಕರು ಇಲ್ಲ ಆಕೆಯ ಮುಂದಿನ ಜೀವನ ಹೇಗೆ? ಹಾಗಾಗಿ ಆಕೆಯನ್ನ ಕೊಲೆ ಮಾಡಿದೆ ಎನ್ನುತ್ತಿರುವ ನಾಗಲೇಶ್ವರ ರಾವ್, ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ. ಇನ್ನು ದಂಪತಿಯ ಓರ್ವ ಮಗಳು ಅಮೆರಿಕದಲ್ಲಿದ್ದಾರೆಂಬ ಮಾಹಿತಿ ಸಿಕ್ಕಿದೆ.

ಪ್ರತ್ಯೇಕ ಘಟನೆ :- ಚಾಲಕನ ಜೊತೆಗೆ ಪತ್ನಿ ಮಾತನಾಡಿದ್ದಕ್ಕೆ ಅನುಮಾನ: ಮಚ್ಚಿನಿಂದ ಕೊಚ್ಚಿ ಪತ್ನಿಯ ಬರ್ಬರ ಹತ್ಯೆ

ಮತ್ತೊಂದು ಪ್ರಕರಣದಲ್ಲಿ ಕೂಡ ಪತಿ ಮಚ್ಚಿನಿಂದ ಕೊಚ್ಚಿ ಪತ್ನಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಚ್ಚಿನಿಂದ ಕೊಚ್ಚಿ ದೇವಿಕಾ(50) ಹತ್ಯೆಗೈದ ಪತಿ ಕುಮಾರ್. ಸದ್ಯ ಕೊಲೆ ಆರೋಪಿ ಕುಮಾರ್ನನ್ನು ಬಂಧಿಸಿದ ಪೊಲೀಸರು, ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಕುಟುಂಬ ಸಮೇತ ಕೇರಳ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಚಾಲಕನ ಜೊತೆಗೆ ಪತ್ನಿ ಮಾತನಾಡಿದ್ದಕ್ಕೆ ಅನುಮಾನ ಅನುಮಾನ ಹೊಂದಿದ್ದ ಆರೋಪಿ ಪತಿ ಕುಮಾರ್, ನಿನ್ನೆ ರಾತ್ರಿ ಮಲಗಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ದೇವಿಕಾರನ್ನು ಕೊಲೆ ಮಾಡಿದ್ದಾರೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದರು. ಆದರೆ ಕೂಡಲೇ ಆರೋಪಿ ಕುಮಾರ್ನನ್ನ ಮಕ್ಕಳು ತಡೆದಿದ್ದಾರೆ.

WhatsApp Group Join Now

Spread the love

Leave a Reply