ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡೋದು ಪಕ್ಕಾ- ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

Spread the love

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಬದಲಾವಣೆ ಚರ್ಚೆ (CM Change row) ಅಧಿಕಾರ ಹಸ್ತಾಂತರದ ಕುರಿತ ಹೇಳಿಕೆಗಳು ಇನ್ನೂ ತಣ್ಣಗಾಗಿಲ್ಲ. ಇದರ ಮುಂದುವರಿದ ಭಾಗ ಎಂಬಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಖುದ್ದು ಬೇಳೂರು ಗೋಪಾಲಕೃಷ್ಣ ಅವರ ಜೊತೆ ಅಧಿಕಾರ ತ್ಯಾಗದ ಕುರಿತು ಆಡಿದ್ದ ಮಾತುಗಳು ಸಿಎಂ ಬದಲಾವಣೆ ಚರ್ಚೆಗೆ ಇನ್ನಷ್ಟು ಪುಷ್ಟಿ ನೀಡಿದೆ.

ಇದೀಗ ಈ ಎಲ್ಲಾ ಬೆಳವಣಿಗೆಗಳ ಕುರಿತು ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಹೌದು, ಸಿ.ಎಂ. ಸಿದ್ದರಾಮಯ್ಯ ಅವರ ಅಧಿಕಾರ ತ್ಯಾಗದ ಮಾತುಗಳನ್ನು ಸಚಿವ ಸತೀಶ್ ಜಾರಕಿಹೊಳಿ ಸಮರ್ಥಿಸಿಕೊಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹೇಳಿರುವುದು ಸತ್ಯ. ರಾಜಕೀಯದಲ್ಲಿ ಯಾರಿಗೂ ಕೂಡ ಅಧಿಕಾರ ಶಾಶ್ವತವಲ್ಲ ಎಂದು ಹೇಳಿದ್ದಾರೆ. ಈ ಹೇಳಿಕೆ ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ಯಾ ಎಂಬ ಕುತೂಹಲ ಮನೆಮಾಡಿದೆ.

ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ತಮ್ಮ ರೀತಿಯಲ್ಲಿ ವ್ಯಾಖ್ಯಾನಿಸಿದ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ಅವರು ಈಗಾಗಲೇ ಅಧಿಕಾರ ತೊರೆಯಲು ಮಾನಸಿಕವಾಗಿ ಸಿದ್ಧರಾಗಿದ್ದಾರೆ ಎಂದಲ್ಲ, ಈಗಲಾದ್ರೂ ಬಿಡಬಹುದು ಅಥವಾ ಮೂವತ್ತು ತಿಂಗಳ ನಂತರವಾದರೂ ಬಿಡಬಹುದು, ಇಲ್ಲವೇ ಅದಕ್ಕೂ ಮೊದಲೇ ಬಿಡಬಹುದು. ಆದ್ರೆ ಒಂದಲ್ಲ ಒಂದು ದಿನ ಬಿಡುವುದಂತೂ ಪಕ್ಕಾ.. ಅದು ಯಾವಾಗಲಾದ್ರೂ ಬಿಡಲೇಬೇಕು’ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಲ್ಲಾ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್‌ ತೆಗೆದುಕೊಳ್ಳಲಿದೆ. ನಮ್ಮ ಪಕ್ಷದಲ್ಲಿ ಯಾವಾಗಲೂ ಒಳ್ಳೆಯ ರಾಜಕೀಯ ವಾತಾವರಣ ಇರಬೇಕು ಎಂಬುದು ನಮ್ಮ ಕಾರ್ಯಕರ್ತರ ಆಶಯ. ಈ ವಿಚಾರವನ್ನು ಹೈಕಮಾಂಡ್ ಸೂಕ್ಷ್ಮವಾಗಿ ಬಗೆಹರಿಸುತ್ತದೆ. ಅಲ್ಲಿಯವರೆಗೂ ತಾಳ್ಮೆಯಿಂದ ಇರಬೇಕು ಎಂದಿದ್ದಾರೆ.

ಇನ್ನು ಇದೇ ವೇಳೆ ದಲಿತ ಸಿಎಂ ವಿಚಾರವನ್ನು ಸಚಿವ ಸತೀಶ್ ಜಾರಕಿಹೊಳಿ ತಳ್ಳಿಹಾಕಿದ್ದು, ಕಾಂಗ್ರೆಸ್ ಹೈಕಮಾಂಡ್ ಮುಂದೆ ಸದ್ಯಕ್ಕೆ ಈ ಅವಧಿಯಲ್ಲಿ ದಲಿತ ಸಿಎಂ ಬಗ್ಗೆ ಯಾವುದೇ ಚರ್ಚೆ ಇಲ್ಲ. ಗೃಹ ಸಚಿವ ಪರಮೇಶ್ವರ್ ಅವರು ನಮ್ಮ ಪಕ್ಷದಲ್ಲಿ ಸೀನಿಯರ್ ಲೀಡರ್ ಇದ್ದಾರೆ. ಈಗ ಬೇಡದ ಚರ್ಚೆಗೆ ಹೋಗುವ ಅಗತ್ಯವಿಲ್ಲ ಎಂದಿದ್ದಾರೆ.

WhatsApp Group Join Now

Spread the love

Leave a Reply