Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ

Scholarship : ನಮಸ್ಕಾರ ಸ್ನೇಹಿತರೇ, 2023-24ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ₹10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಇದನ್ನೂ ಕೂಡ ಓದಿ : Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?

WhatsApp Group Join Now

ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ₹10,000/- ನೀಡಲಾಗುವುದು.

ಅರ್ಜಿದಾರರು 2023-24ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ)ಯಲ್ಲಿ ಓದುತ್ತಿರಬೇಕು. 01.04.2023 ರಿಂದ 31.03.2024 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು. ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧೀಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ದಿನಾಂಕ 01-04-2023 ರಿಂದ 31-03-2024 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.

WhatsApp Group Join Now

ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ

ಸೇವಾ ಸಿಂಧು SEVA SINDHU ವೆಬ್ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ : 30/06/2024 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now
mahima bhat - kannada news time

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.

Leave a Reply