ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

Spread the love

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ (seasonal flu) ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ (Karnataka Health Department) ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಡಿಸೆಂಬರ್ ಸೇರಿದಂತೆ ಜನವರಿಯಿಂದ ಮಾರ್ಚ್ ವರೆಗೆ ಸೀಸನಲ್ ಫ್ಲೂ ಹೆಚ್ಚಳ ಭೀತಿ ಹಿನ್ನಲೆ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಎಲ್ಲಾ ಲ್ಯಾಬ್‌ಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್‌ಗಳನ್ನು ಇರಿಸಿಕೊಳ್ಳುವುದು, ಫ್ಲೂ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸರಿಯಾದ ಸಮಯದಲ್ಲಿ ಮಾನಿಟರಿಂಗ್‌ಗೆ ಸೂಚಿಸಲಾಗಿದೆ.

ಇನ್ನು ಸೋಂಕಿತರ ಎಂಜಿಲಿನಿಂದ ಸೋಂಕು ಹರಡುತ್ತದೆ. ಮಕ್ಕಳು, ಹಿರಿಯರು, ಗರ್ಭಿಣಿಯರು, ಔಷಧಿಗಳ ಮೇಲೆ ಅವಲಂಬಿತರಾದವರಿಗೆ ಹೆಚ್ಚಿನ ಅಪಾಯವಿದೆ. ಸೀಸನಲ್ ಫ್ಲೂ ತಗುಲಿದರೆ ಆಸ್ಪತ್ರೆಗೆ ದಾಖಲಾಗುವ ಅಪಾಯವಿದೆ. ಹೀಗಾಗಿ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ.

ಸೀಸನಲ್ ಫ್ಲೂ ಲಕ್ಷಣಗಳು

ಜ್ವರ, ಕೆಮ್ಮು, ಕೆಂಪು ಗುಳ್ಳೆ, ಹಸಿವು ಆಗದಿರುವುದು, ಮೈ-ಕೈ ನೋವು, ಶೀತ, ಒಣ ಕೆಮ್ಮು ಇದರ ಪ್ರಮುಖ ಗುಣಲಕ್ಷಣಗಳು. ಸೀಸನಲ್ ಫ್ಲೂ ಸಾಮಾನ್ಯವಾಗಿ ಒಂದು ವಾರಗಳ ಕಾಲ ಇರಬಹುದು ಅಥವಾ ಕೆಲವೊಮ್ಮೆ 3 ವಾರಗಳ ಕಾಲ ಇರಬಹುದು.

ಆರೋಗ್ಯ ಇಲಾಖೆ ಸೂಚನೆಗಳೇನು?

• ಪ್ರತಿ ದಿನ ಕನಿಷ್ಟ 5ರಷ್ಟು ಐಎಲ್ಐ ಕೇಸ್, 100ರಷ್ಟು ಸಾರಿ (SARI) ಕೇಸ್ಗಳ ಪರೀಕ್ಷೆಗೆ ಸೂಚನೆ.
• ಎಲ್ಲಾ ಪ್ರಯೋಗಾಲಯಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್ಗಳನ್ನು ಇರಿಸಿಕೊಳ್ಳುವುದು.
• ಪಿಪಿಇ ಕಿಟ್ಗಳು, ಎನ್95 ಮಾಸ್ಕ್, oseltamivir ಮಾತ್ರೆಗಳು ಸೇರಿ ಅಗತ್ಯ ಔಷಧಗಳ ಶೇಖರಣೆಗೆ ಸೂಚನೆ.
• ಇನ್ಫ್ಲೂಯೆನ್ಸ್ ಲಸಿಕೆ ಶೇಖರಣೆ.
• ಹೆಲ್ತ್ ಕೇರ್ ವರ್ಕರ್ಸ್, ಗರ್ಭಿಣಿಯರು, ಹೆಚ್ಚಿನ ಅಪಾಯವುಳ್ಳ ರೋಗಿಗಳು ಸೂಕ್ತ ಲಸಿಕೆ ಪಡೆಯುವಂತೆ ಸಲಹೆ.
• ಕ್ಲಿನಿಕಲ್ ಮ್ಯಾನೇಜ್ಮೆಂಟ್ ಹಾಗೂ ಕ್ರಿಟಿಕಲ್ ಕೇರ್ ಸಿದ್ಧತೆ.
• ವೆಂಟಿಲೇಟರ್ಗಳ ಸಿದ್ಧತೆಗೆ ಸಲಹೆ.
• ಜಾಗೃತಿ ಮೂಡಿಸುವುದು ಮತ್ತು ಸರಿಯಾದ ಸಮಯದಲ್ಲಿ ಮಾನಿಟರಿಂಗ್ಗೆ ಕರೆ ನೀಡಲಾಗಿದೆ.

WhatsApp Group Join Now

Spread the love

Leave a Reply