ವಿದ್ಯಾರ್ಥಿಗಳ ಗಮನಕ್ಕೆ : ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.?

Spread the love

2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರ ಫಲಿತಾಂಶವನ್ನು 9 ರಂದು ಗುರುವಾರ ಪ್ರಕಟಿಸಲಾಗುವುದು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕ ಹೆಚ್.ಎನ್. ಗೋಪಾಲಕೃಷ್ಣ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಬಾರಿ ಡಿಜಿ ಲಾಕರ್ ಮೂಲಕ ವಿದ್ಯಾರ್ಥಿಗಳು ಫಲಿತಾಂಶ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ.

ಸರ್ವರ್ ಸಮಸ್ಯೆಯಿಂದ ಆಗುತ್ತಿದ್ದ ತೊಂದರೆಗಳು ನಿವಾರಣೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಏಪ್ರಿಲ್ 9ರಂದು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ಅದೇ ದಿನ ಅಧಿಕೃತ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು.

ಈ ಬಾರಿ ಪರೀಕ್ಷೆಗೆ ಮೊದಲೇ ಏ. 7ರಂದು ಫಲಿತಾಂಶ ಪ್ರಕಟಿಸುವುದಾಗಿ ಸಂಭಾವ್ಯ ದಿನಾಂಕದ ಬಗ್ಗೆ ಹೇಳಲಾಗಿತ್ತು.

WhatsApp Group Join Now

Spread the love

Leave a Reply