Sewing Machine : ಹೊಲಿಗೆ ಯಂತ್ರ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.? ಕೊನೆಯ ದಿನಾಂಕ.?

Sewing Machine : ನಮಸ್ಕಾರ ಸ್ನೇಹಿತರೇ, ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದಿಂದ ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ. ಉಚಿತ ಹೊಲಿಗೆ ಯಂತ್ರದ(Free Sewing Machine) ಪ್ರಯೋಜನವನ್ನು ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು.? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು.? ಬೇಕಾಗುವ ದಾಖಲಾತಿಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : Tractor Subsidy : ಟ್ರಾಕ್ಟರ್ ಖರೀದಿಸಲು ರೈತರಿಗೆ 50% ಸಹಾಯಧನ..! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

ಪ್ರತಿ ವರ್ಷ ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳಿಗೆ ವಿವಿಧ ವಲಯಗಳಲ್ಲಿ ಸ್ವ- ಉದ್ಯೋಗ ಮಾಡಲು ಅರ್ಥಿಕವಾಗಿ ನೆರವು ನೀಡಲು ರಾಜ್ಯದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ವಿವಿಧ ನಿಗಮಗಳಿಂದ ಉಚಿತವಾಗಿ ಹೊಲಿಗೆ ಯಂತ್ರವನ್ನು ನೀಡಲು ಅರ್ಜಿಯನ್ನ ಆಹ್ವಾನಿಸಲಾಗುತ್ತಿದ್ದು, ಅದರಂತೆ ಈ ವರ್ಷವು ಕೂಡ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಆಸಕ್ತ ಹಾಗು ಅರ್ಹ ಫಲಾನುಭವಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರದ(Free Sewing Machine) ಯೋಜನೆಯ ಪ್ರಯೋಜನವನ್ನ ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.?

  • ಹಿಂದುಳಿದ ವರ್ಗಗಳ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಡಿಯಲ್ಲಿ ಪ್ರಯೋಜನವನ್ನು ಪಡೆಯಲು ಅರ್ಜಿ ಸಲ್ಲಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದವರಾಗಿರಬೇಕು.
  • ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪುದೇಶದವರಿಗೆ ರೂ.1,20,000/-ಗಳ ಒಳಗಿರಬೇಕು,
  • ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 31 ಆಗಸ್ಟ್ 2024

ಇದನ್ನೂ ಕೂಡ ಓದಿ : Borewell Subsidy Scheme : ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?

ಬೇಕಾಗುವ ದಾಖಲೆಗಳೇನು.?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ರೇಷನ್ ಕಾರ್ಡ ಪ್ರತಿ
  • ಪಾಸ್ ಪೋರ್ಟ್ ಸೈಜ್ ಪೋಟೋ
  • ಹೋಲಿಗೆ ಯಂತ್ರ ತರಬೇತಿ ಪ್ರಮಾಣ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್

ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವಿಶೇಷ ಸೂಚನೆಗಳು :-

  • ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ವಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
  • 2023-24ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
  • ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾ‌ರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ವಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
  • ಈ ಮೇಲ್ಕಂಡ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಕೂಡ ಓದಿ : Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?

ಅರ್ಜಿ ಸಲ್ಲಿಸುವ ವಿಧಾನ :-

ಉಚಿತ ಹೊಲಿಗೆ ಯಂತ್ರವನ್ನು (Free Sewing Machine) ಪಡೆಯಲು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಅರ್ಜಿಗಳನ್ನು ಸೇವಾಸಿಂಧು ವೋರ್ಟಲ್ ಮುಖಾಂತರ ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳನ್ನು ನೇರವಾಗಿ ಭೇಟಿ ಮಾಡಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಇನ್ನೂ ಹೆಚ್ಚಿನ ಮಾಹಿತಿಗಾಗಿ :- ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಹಾಯವಾಣಿ ಸಂಖ್ಯೆ : 80-22374832, 8050770004, 805077000

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply