SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್

Spread the love

ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ (SSLC) 33% ಅಂಕ ಪಡೆದರೆ ಉತ್ತೀರ್ಣ (Pass) ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್‌ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ 33% ಪಡೆಯಬೇಕಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ 3 ಪರೀಕ್ಷೆ ವ್ಯವಸ್ಥೆ ಜಾರಿ ಮಾಡಿದ್ದೇವೆ. ಪಾರದರ್ಶಕವಾಗಿ ಇರಲಿ ಅಂತ ವೆಬ್ ಕ್ಯಾಸ್ಟ್ ಮಾಡಿದ್ವಿ. ಪರೀಕ್ಷೆಗಳು ಉತ್ತಮವಾಗಿ ನಡೆದವು. ವೆಬ್ ಕ್ಯಾಸ್ಟಿಂಗ್ ನಿಂದ ಕಡಿಮೆ ಅಂಕ ಬಂದಾಗ ಶಿಕ್ಷಕರು ಜವಾಬ್ದಾರಿ ತಗೊಂಡು ಕೆಲಸ ಮಾಡಿದ್ರು. ವಿಶೇಷ ತರಗತಿ ಪಡೆದು ವಿದ್ಯಾರ್ಥಿಗಳನ್ನ ತಯಾರು ಮಾಡಿದ್ರು. ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದು ವಿವರಿಸಿದ್ರು.

ಇದೀಗ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು 33% ಪಾಸಿಂಗ್‌ ಅಂಕ ನಿಗದಿ ಮಾಡಲಾಗಿದೆ. 625ಕ್ಕೆ 206 ಅಂಕ ಪಡೆದರೆ ಅಥವಾ ಆಯಾ ವಿಷಯದ ಒಟ್ಟು ಅಂಕಗಳಲ್ಲಿ 30 ಅಂಕ ಪಡೆದಿರಬೇಕು. ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು 33% ಅಂಕ ಪಡೆದ ವಿದ್ಯಾರ್ಥಿಯನ್ನ ಉತ್ತೀರ್ಣ ಎಂದು ಘೋಷಿಸಲಾಗುತ್ತದೆ ತಿಳಿಸಿದರು.

2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗೋ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ.

WhatsApp Group Join Now

Spread the love

Leave a Reply