‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಸಂಬಳ ಪ್ಯಾಕೇಜ್’ ನಲ್ಲಿ ನೋಂದಾಯಿಸಲು ಜ. 16 ಕೊನೆಯ ದಿನ.!

Spread the love

ಸರ್ಕಾರದಿಂದ ನೇರವಾಗಿ / ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ‘ಎ’ ‘ಬಿ’ ಮತ್ತು ‘ಸಿ’ ಗುಂಪಿನ ಅರ್ಹ ಅಧಿಕಾರಿಗಳು/ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವಲ್ಲಿ ಕಾಲಾವಧಿಯನ್ನು ವಿಸ್ತರಿಸುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ಎಲ್ಲಾ ಅರ್ಹ “ಎ”, “ಬಿ” ಮತ್ತು “ಸಿ” ಗುಂಪಿನ ಅಧಿಕಾರಿಗಳು/ನೌಕರರಿಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ದಿನಾಂಕ: 15.12.2025 ರೊಳಗಡೆ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು.

ಆದರೆ, ಹಲವು ಅಧಿಕಾರಿಗಳು/ನೌಕರರು ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವಲ್ಲಿ ಇನ್ನೂ ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ, ‘ಎ’ ಮತ್ತು “ಬಿ” ಗುಂಪಿನ ಅಧಿಕಾರಿಗಳಿಗೆ ಹಾಗೂ ‘ಸಿ’ ಗುಂಪಿನ ನೌಕರರಿಗೆ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಲು ದಿನಾಂಕ: 16.01.2026ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.

WhatsApp Group Join Now

Spread the love

Leave a Reply