Subsidy Loan : ರೈತರಿಗೆ ಹೈನುಗಾರಿಕೆ ಮಾಡಲು ಸಬ್ಸಿಡಿ ಸಹಿತ 2 ಲಕ್ಷ ರೂಪಾಯಿ ಸಾಲ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Subsidy Loan : ನಮಸ್ಕಾರ ಸ್ನೇಹಿತರೇ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯದ ಮತ್ತು ದೇಶದ ರೈತರಿಗೆ ಆರ್ಥಿಕವಾಗಿ ಸದೃಢಗೊಳ್ಳುವ ಸಲುವಾಗಿ ಅನೇಕ ಯೋಜನೆಗಳನ್ನು ರೂಪಿಸುತ್ತಾ ಬಂದಿದ್ದು, ಅದರಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಸುಮಾರು ₹2 ಲಕ್ಷ ರೂಪಾಯಿಗಳವರೆಗೆ ಆರ್ಥಿಕ ನೆರವು ನೀಡಲಾಗುತ್ತಿದೆ.

ಇದನ್ನೂ ಕೂಡ ಓದಿ : PM Fasal Bima Yojana : ರೈತರೇ ಈ ಯೋಜನೆಗೆ ಈ ಕೂಡಲೇ ಹೆಸರು ನೊಂದಾಯಿಸಿ ಹಣ ಪಡೆಯಿರಿ !

ಅಲ್ಲದೇ, ರೈತರಿಗಾಗಿ ಗ್ರಾಮ ಪಂಚಾಯತಿ ವತಿಯಿಂದ ದನದ ಕೊಟ್ಟಿಗೆಗಳನ್ನು ನಿರ್ಮಾಣ ಮಾಡಲು, ಸಹಾಯಧನವನ್ನು ಕೂಡ ಸರ್ಕಾರ ನೀಡುತ್ತಿದೆ. ದನದ ಕೊಟ್ಟಿಗೆ ನಿರ್ಮಾಣ ಮಾಡಲು ರೈತರು ಗ್ರಾಮ ಪಂಚಾಯಿತಿಯಲ್ಲಿ(Grama Panchayath) ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಹೈನುಗಾರಿಕೆ ಉದ್ಯಮವನ್ನು ನಡೆಸಲು ಸುಮಾರು ₹60,000/- ರೂಪಾಯಿಗಳವರೆಗೆ ದನದ ಕೊಟ್ಟಿಗೆ ನಿರ್ಮಾಣ ಮಾಡಲು ಸಹಾಯಧನವನ್ನ ನೀಡಲಾಗುತ್ತದೆ. ಅದೂ ಅಲ್ಲದೇ, ಹೈನುಗಾರಿಕೆ ಉದ್ಯಮ ಮಾಡುವ ಸಲುವಾಗಿ ಈ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ರೈತರಿಗೆ ಸುಮಾರು 2 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ನೀಡುತ್ತಿದ್ದು, ಅದರಲ್ಲಿ ಸಬ್ಸಿಡಿ ಸಹ ನೀಡಲಾಗುತ್ತದೆ.

ಸರ್ಕಾರ ನೀಡುವ 2 ಲಕ್ಷ ರೂಪಾಯಿ ಸಾಲದಲ್ಲಿ ರೈತರು ಉತ್ತಮ ತಡೆಯ ನಾಲ್ಕು ಹಸುಗಳನ್ನು ಖರೀದಿ ಮಾಡಲು ಹಣವು ಸಿಗಲಿದೆ.

ಇದನ್ನೂ ಕೂಡ ಓದಿ : Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ

ಬೇಕಾಗುವ ದಾಖಲೆಗಳೇನು.?

  • ಆಧಾ‌ರ್ ಕಾರ್ಡ್
  • ರೇಷನ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಬಯಸುವ ಅರ್ಹ ರೈತರು ನಿಮ್ಮ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ(PDO) ಸಹಾಯದೊಂದಿಗೆ ಈ ಯೋಜನೆಗೆ ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನ ಪಡೆದುಕೊಳ್ಳಬಹುದು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply