Subsidy Scheme : ಪೆಟ್ರೋಲ್ ಡೀಸೆಲ್ ಪಂಪ್ ಸೆಟ್’ ಗೆ ಶೇ.90% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! ಯಾರೆಲ್ಲಾ ಅರ್ಹರು.?

Subsidy Scheme : ನಮಸ್ಕಾರ ಸ್ನೇಹಿತರೇ, 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಬ್ಸಿಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಅರ್ಹ ರೈತರು ಅರ್ಜಿಯ ನಮೂನೆಗಳನ್ನ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು ಅರ್ಜಿಯನ್ನ ಸಲ್ಲಿಸಬಹುದು. ಹಾಗು ಅರ್ಹ ರೈತರು ಕನಿಷ್ಟ 1 ಎಕರೆ ಜಮೀನನ್ನು ಹೊಂದಿರಬೇಕು.

ಇದನ್ನೂ ಕೂಡ ಓದಿ : ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?

ಈ ಯೋಜನೆಯನ್ನು ರೈತರ ಅವಶ್ಯಕತೆಗನುಗುಣವಾಗಿ ಅಚ್ಚು ಕಟ್ಟು ಪ್ರದೇಶವನ್ನು ಒಳಗೊಂಡಂತೆ ಅನುಷ್ಠಾನಗೊಳಿಸಲಾಗುವುದು. ಯಾವೆಲ್ಲಾ ಘಟಕಗಳಿಗೆ ಎಷ್ಟು ಸಬ್ಸಿಡಿ ನೀಡಲಾಗುವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗೆ ನೀಡಲಾಗಿದೆ.

• ಕ್ಷೇತ್ರಬದು ನಿರ್ಮಾಣಕ್ಕೆ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ವಂಗಡ ವರ್ಗ 90%)
• ಕೃಷಿ ಹೊಂಡ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
• ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
• ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (ಸಾಮಾನ್ಯ ವರ್ಗ 40% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ವಂಗಡ ವರ್ಗ 50%)
• ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್ / ಪೇಟ್ರೋಲ್ ಪಂಪ್‌ಸೆಟ್ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
• ನೀರನ್ನು ಬೆಳಗೆ ಹಾಯಿಸಲು ಸೂಕ್ಷ್ಮ (ತುಂತುರು / ಹನಿ) ನೀರಾವರಿ (ಎಲ್ಲಾ ವರ್ಗದ ರೈತರಿಗೆ 90%) ಸೌಲಭ್ಯಗಳನ್ನು ನಿಯಮಾನುಸಾರ ನೀಡಲಾಗುವುದು.

ಇದನ್ನೂ ಕೂಡ ಓದಿ : Railway Recruitment : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,558 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! ಎಷ್ಟು ಸಂಬಳ ಸಿಗುತ್ತೆ.?

ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ದ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಕೃಷಿ ಭಾಗ್ಯ ಯೋಜನೆಯ ಉದ್ದೇಶವಾಗಿದ್ದು, ಪ್ರತಿಯೊಬ್ಬ ಫಲಾನುಭವಿಗೆ ಮೇಲೆ ತಿಳಿಸಿದ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಲಾಗುವುದು.

Leave a Reply