Swavalambi Sarathi Yojane : ವಾಹನ ಖರೀದಿಸಲು ₹3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?

Swavalambi Sarathi Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!

ಅರ್ಹ ಹಾಗು ಆಸಕ್ತ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಹುಬ್ಬಳ್ಳಿ ಧಾರವಾಡ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ನವೆಂಬರ 23, 2024 ರೊಳಗಾಗಿ ಅರ್ಜಿಯನ್ನ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ ಸಹಾಯವಾಣಿ ಸಂಖ್ಯೆ : 9482-300-400 ಹಾಗೂ ನಿಗಮದ ವೆಬ್‍ಸೈಟ್, ಜಿಲ್ಲಾ ವ್ಯವಸ್ಥಾಪಕರ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

ಸ್ವಾವಲಂಬಿ ಸಾರಥಿ ಯೋಜನೆ :-

ಈ ಸ್ವಾವಲಂಬಿ ಸಾರಥಿ ಯೋಜನೆ (Swavalambi Sarathi Yojane) ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕ ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.

ಯೋಜನೆಗೆ ಸಬ್ಸಿಡಿ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.?

• ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.
• ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು.
• ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
• ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗಿಯಾಗಿರಬಾರದು.
• ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಪರಿಶಿಷ್ಟ ಪಂಗಡದವರಾಗಿರಬೇಕು.

ಇದನ್ನೂ ಕೂಡ ಓದಿ : Gold Rate Today : ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ – ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

ಬೇಕಾಗುವ ದಾಖಲೆಗಳೇನು.?

• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ
• ಡ್ರೈವಿಂಗ್ ಲೈಸೆನ್ಸ್
• ಪಾಸ್ ಪೋರ್ಟ್ ಸೈಜ್ ಫೋಟೋ
• ಮೊಬೈಲ್ ನಂಬರ್

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

Leave a Reply