Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ

Taxi Car Subsidy : ನಮಸ್ಕಾರ ಸ್ನೇಹಿತರೇ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯ ಹಾಗು ಸ್ವಾವಲಂಬಿ ಸಾರಥಿ ಯೋಜನೆಯಡಿ ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಹಾಗೂ ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ನೇರ ಸಾಲ ಸಬ್ಸಿಡಿ ಸೌಲಭ್ಯ ಪಡೆಯಲು ಅರ್ಜಿಯನ್ನ ಆಹ್ವಾನಿಸಲಾಗಿದೆ. ಈ ಯೋಜನೆಗೆ ಏನೆಲ್ಲಾ ಅರ್ಹತೆಗಳಿರಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?

ಯಾವ ಯಾವ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಬಹುದು.?

  • ಅರಿವು ಶೈಕ್ಷಣಿಕ ಸಾಲ ಯೋಜನೆ
  • ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು
  • ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು
  • ಗಂಗಾ ಕಲ್ಯಾಣ ನೀರಾವರಿ ಯೋಜನೆ
  • ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಸಹಾಯಧನ ಯೋಜನೆ
  • ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)
  • ಸ್ವಾವಲಂಬಿ ಸಾರಥಿ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದು.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.?

ಪ್ರವರ್ಗ-1ರ 6 (ಎ) ಯಿಂದ 6 (ಎಕೆ) ವರೆಗೆ ಬರುವ ಅಂಬಿಗ/ ಅಂಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪಜಾತಿಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ಗ್ರಾಮ ಒನ್ / ಕರ್ನಾಟಕ ಒನ್, ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲಾತಿಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ದಲ್ಲಿ ಆನ್ ಲೈನ್ ಮೂಲಕ ಆಗಸ್ಟ್ 31ರೊಳಗೆ ಅರ್ಜಿಯನ್ನ ಸಲ್ಲಿಸಬೇಕು.

ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿಗಮದ ಈ ವೆಬ್ ಸೈಟ್ ಗೆ ಭೇಟಿ ನೀಡಿ :- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ

ನಿಗಮದ ದೂರವಾಣಿ ಸಂಖ್ಯೆ 080-22864099 ಅಥವಾ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಅಥವಾ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು.

ಇದನ್ನೂ ಕೂಡ ಓದಿ : Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ, ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಆಗಸ್ಟ್ 31ರೊಳಗೆ ಅರ್ಜಿಯನ್ನ ಸಲ್ಲಿಸಬೇಕು.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡಿಂಗ್ ಮಾಡಿರಬೇಕು. ನಿಗಮವು ಅನುಷ್ಠಾನಗೊಳಿಸುವ ಯೋಜನೆಗಳಲ್ಲಿ ಸರ್ಕಾರದ ಮತ್ತು ನಿರ್ದೇಶಕ ಮಂಡಳಿ ವಿವೇಚನಾ ಕೋಟಾದಡಿ ಸೌಲಭ್ಯ ಬಯಸುವವರು ಸಹ ಆನ್ ಲೈನ್ ನಲ್ಲಿ ಅರ್ಜಿಯನ್ನ ಸಲ್ಲಿಸಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಅರ್ಹ ಫಲಾಫೇಕ್ಷಿಗಳು ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲಾತಿಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ ಇಲಾಖೆಗಳಲ್ಲಿ ಮೇಲೆ ತಿಳಿಸಲಾದ ವಿವಿಧ ಯೋಜನೆಗಳ ಪ್ರಯೋಜನ ಪಡೆದಿದ್ದಲ್ಲಿ, ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

ಈಗಾಗಲೇ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಈ ಯೋಜನೆಗೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ

ಸ್ವಾವಲಂಬಿ ಸಾರಥಿಗೆ ಏನೆಲ್ಲಾ ಅರ್ಹತೆಗಳಿರಬೇಕು.?

  • ಅರ್ಜಿದಾರರು ಲಘುವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
  • ಅರ್ಜಿದಾರರು ನಿರುದ್ಯೋಗಿಯಾಗಿರಬೇಕು.
  • ಸ್ವಯಂ ಟ್ಯಾಕ್ಸಿ ಚಾಲನೆ ಉದ್ದೇಶಕ್ಕೆ ನೋಂದಾಯಿಸಬೇಕು. • ಟ್ಯಾಕ್ಸಿ, ಟಾಟಾ ಎಸಿ ಗೂಡ್ಸ್ ವಾಹನ ಖರೀದಿಗೆ 1 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply