ತಾಯಿ-ಮಗು ಸಹಾಯ ಹಸ್ತ ಯೋಜನೆ – ₹6,000 ರೂಪಾಯಿ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?

ನಮಸ್ಕಾರ ಸ್ನೇಹಿತರೇ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ “ತಾಯಿ ಮಗು ಸಹಾಯ ಹಸ್ತ” ಯೋಜನೆಯಡಿ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ಸಹಾಯಧನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ತಾಯಿ – ಮಗು ಯೋಜನೆಯಡಿ ₹6,000/- ಅರ್ಥಿಕ ನೆರವು ಪಡೆಯಲು ಆನ್ನೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ.

ಇದನ್ನೂ ಕೂಡ ಓದಿ : PMJAY : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ 5 ಲಕ್ಷ ರೂಪಾಯಿಯ ಬಂಪರ್ ಗಿಫ್ಟ್​! ಇದನ್ನ ಪಡೆಯುವುದು ಹೇಗೆ.? ಸಂಪೂರ್ಣ ಮಾಹಿತಿ

ನೋಂದಾಯಿತ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಂಡಳಿಯು ಆಕೆಯ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ಸಹಾಯಧನವನ್ನು ನೀಡಲಾಗುತ್ತದೆ.

ತಾಯಿ – ಮಗು ಸಹಾಯ ಹಸ್ತ ಯೋಜನೆಯಡಿ ಎಷ್ಟು ಸಹಾಯಧನ ನೀಡಲಾಗುತ್ತದೆ.?

ಕಾರ್ಮಿಕ ಮಂಡಳಿಯ ಈ ಯೋಜನೆಯಡಿ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಂಡಳಿಯು ಆಕೆಯ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ವಾರ್ಷಿಕ ₹6,000/- (ಪ್ರತಿ ತಿಂಗಳಿಗೆ ₹500/- ರೂಪಾಯಿಗಳು) ಹಣವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಜಮಾ ಮಾಡಲಾಗುತ್ತದೆ.

ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

ಬೇಕಾಗುವ ದಾಖಲೆಗಳೇನು.?

  • ಮಂಡಳಿ ನೀಡಿರುವ ಗುರುತಿನ ಚೀಟಿ/ಸ್ಮಾರ್ಟ್ ಕಾರ್ಡ್ (ದೃಢೀಕೃತ )
  • ಮಕ್ಕಳ ಛಾಯಾಚಿತ್ರ
  • ಉದ್ಯೋಗ ದೃಡೀಕರಣ ಪತ್ರ
  • ಬ್ಯಾಂಕ್ ಖಾತೆ ಪುರಾವೆ
  • ಡಿಸ್ಚಾರ್ಜ್ ಸಾರಾಂಶ
  • ಮಗುವಿನ ಜನನ ಪ್ರಮಾಣಪತ್ರ
  • ಮಗುವಿನ ಜನನದ ಆರು ತಿಂಗಳೊಳಗೆ ಅರ್ಜಿಯನ್ನು ಸಲ್ಲಿಸುವುದು
  • ಮೂರು ವರ್ಷದವರೆಗೂ ಪ್ರತಿ ವರ್ಷ ಅರ್ಜಿಯನ್ನು ಸಲ್ಲಿಸತಕ್ಕದ್ದು
  • ಮಗುವಿನ ಜೀವಿತ ಕುರಿತು ಪ್ರತಿ (ಎರಡು ಹಾಗೂ ಮೂರನೇ ವರ್ಷ) ವರ್ಷ ಅಫಿಡೆವಿಟ್ ಸಲ್ಲಿಸತಕ್ಕದ್ದು

ಅನ್ವಯಿಸುವ ವಿಧಾನ :-

  • ಅರ್ಜಿದಾರರು ಅರ್ಜಿಯನ್ನು ಸಲ್ಲಿಸುವುದು
  • ನೋಂದಣಾಧಿಕಾರಿಗಳಾದ ಹಿರಿಯ / ಕಾರ್ಮಿಕ ನಿರೀಕ್ಷಕರಿಂದ ಪರಿಶೀಲನೆ
  • ಕಾರ್ಮಿಕ ಅಧಿಕಾರಿಯವರಿಂದ ಪರಿಶೀಲನೆ ಮತ್ತು ಅನುಮೋದನೆ

ಇದನ್ನೂ ಕೂಡ ಓದಿ : Crop Damage : ಮಳೆಯಿಂದ ಬೆಳೆ ಹಾನಿ ಆಗಿರುವ ರೈತರಿಗೆ ಪರಿಹಾರದ ಹಣ ಬಿಡುಗಡೆ.! ಈ ದಾಖಲೆಗಳನ್ನು ಸಲ್ಲಿಸಿ.!

ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.?

ನೋಂದಾಯಿತ ಮಹಿಳಾ ನಿರ್ಮಾಣ ಕಾರ್ಮಿಕ ಮಗುವಿಗೆ ಜನ್ಮ ನೀಡಿದ ದಿನಾಂಕದಿಂದ ಮುಂದಿನ 3 ವರ್ಷಗಳವರೆಗೆ ಮಗುವಿನ ಪ್ರಿ-ಸ್ಕೂಲ್ ಶಿಕ್ಷಣ ಮತ್ತು ಪೌಷ್ಟಿಕಾಂಶ ಆಹಾರ ಸೇವನೆ ಬೆಂಬಲದ ಸಹಾಯ ಪಡೆಯಲು ಅರ್ಹಳಾಗಿರುತ್ತಾಳೆ. ಈ ಸೌಲಭ್ಯವನ್ನು ನೋಂದಾಯಿತ ಮಹಿಳಾ ನಿರ್ಮಾಣ ಕಾರ್ಮಿಕರು ಎರಡು ಬಾರಿ ಪಡೆಯಬಹುದು (ಮೊದಲ ಎರಡು ಮಕ್ಕಳ ಜನನಕ್ಕೆ ಮಾತ್ರ) ಅರ್ಜಿಯು ಜನನ ಮತ್ತು ಮರಣ ನೋಂದಾಣಾ ಅಧಿಕಾರಿಯಿಂದ ಪಡೆದ ಜನನ ಪ್ರಮಾಣ ಪತ್ರವನ್ನು ಒಳಗೊಂಡಿರಬೇಕು.

ಎಲ್ಲಿ ಅರ್ಜಿ ಸಲ್ಲಿಸಬೇಕು.?

ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹ ಫಲಾನುಭವಿಗಳು ಮಂಡಳಿಯ ಅಧಿಕೃತ ತಂತ್ರಾಂಶವನ್ನು ಪ್ರವೇಶ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಕೂಡ ಓದಿ : Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?

ಅರ್ಜಿ ಸಲ್ಲಿಸುವ ವಿಧಾನ :

  • ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಕಾರ್ಮಿಕ ಇಲಾಖೆ ವೆಬ್ ಸೈಟ್ ಅನ್ನು ಪ್ರವೇಶ ಮಾಡಬೇಕು.
  • ತದನಂತರ ಅರ್ಜಿದಾರರ ಮೊಬೈಲ್ ಸಂಖ್ಯೆಯನ್ನು ಹಾಕಿ “Generate OTP” ಬಟನ್ ಮೇಲೆ ಕ್ಲಿಕ್ ಮಾಡಿ OTP ಪಡೆದು OTP ಹಾಕಿ “ಲಾಗಿನ್/login” ಬಟನ್ ಮೇಲೆ ಕ್ಲಿಕ್ ಮಾಡಬೇಕು.
  • ಮೇಲಿನ ಹಂತವನ್ನು ಪೂರ್ಣಗೊಳಿಸಿದ ಬಳಿಕ ಈ ಪೇಜ್ ನಲ್ಲಿ ಅರ್ಜಿದಾರರ ವೈಯಕ್ತಿಕ ವಿವರವನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಕಾರ್ಮಿಕ ಇಲಾಖೆ ಸಹಾಯವಾಣಿ ಸಂಖ್ಯೆ :- 155214

ಈ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಿ :- ಕಾರ್ಮಿಕ ಇಲಾಖೆ, ಕರ್ನಾಟಕ ಸರ್ಕಾರ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply