ಜನಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿಯ ಬಾಳು ಅಂತ್ಯ: ಟ್ರ್ಯಾಕ್ಟರ್ ಅಟ್ಟಹಾಸಕ್ಕೆ ಬಲಿಯಾದ ಪೂರ್ಣಿಮಾ ಭಟ್!

Spread the love

ಸಿದ್ದಾಪುರ: ಕರ್ತವ್ಯದ ಹಾದಿಯೇ ಸಾವಿನ ಹಾದಿಯಾದ ಕರುಣಾಜನಕ ಘಟನೆಯೊಂದು ಶಿರಸಿ-ಸಿದ್ದಾಪುರ ಮುಖ್ಯರಸ್ತೆಯ ಕನ್ನಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಜನಗಣತಿ ಕಾರ್ಯದ ನಿಮಿತ್ತ ಮಾಹಿತಿ ನೀಡಲು ಸ್ಕೂಟರ್ ಮೇಲೆ ತೆರಳುತ್ತಿದ್ದ ಶಿಕ್ಷಕಿಯೊಬ್ಬರು ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ.

ನಡೆದಿದ್ದೇನು?

ಪಟ್ಟಣದ ಹೊಸೂರಿನ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಪೂರ್ಣಿಮಾ ಭಟ್ (46) ಅವರು ಇಂದು ಸ್ಕೂಟರ್ ಮೇಲೆ ತೆರಳುತ್ತಿದ್ದರು. ಈ ವೇಳೆ ಶಿರಸಿ ಕಡೆಯಿಂದ ಸಿದ್ದಾಪುರಕ್ಕೆ ಅತಿ ವೇಗವಾಗಿ ಬಂದ ಕಟ್ಟಿಗೆ ತುಂಬಿದ ಟ್ರ್ಯಾಕ್ಟರ್, ಇವರ ಸ್ಕೂಟರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಶಿಕ್ಷಕಿ ಪೂರ್ಣಿಮಾ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಚಾಲಕನ ನಿರ್ಲಕ್ಷ್ಯವೇ ಕಾರಣ?

ಅಪಘಾತಕ್ಕೆ ಹಾವೇರಿ ಮೂಲದ ಟ್ರ್ಯಾಕ್ಟರ್ ಚಾಲಕ ಆಕಾಶ್ ಮಂಜಪ್ಪ ಬಾಲಣ್ಣನವರ್ ಎಂಬಾತನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಕಾರಣ ಎನ್ನಲಾಗುತ್ತಿದೆ. ಸದ್ಯ ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮರುಗಿದ ಸಾರ್ವಜನಿಕರು

ಮೃತ ಶಿಕ್ಷಕಿ ಪೂರ್ಣಿಮಾ ಭಟ್ ಅವರು ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ಕರ್ತವ್ಯದ ಮೇಲಿರುವಾಗಲೇ ಸಂಭವಿಸಿದ ಈ ದುರ್ಮರಣಕ್ಕೆ ಸ್ಥಳೀಯರು ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ತೀವ್ರ ಕಂಬನಿ ಮಿಡಿದಿದ್ದಾರೆ.

“ರಸ್ತೆಯಲ್ಲಿ ಅತಿವೇಗದ ಚಾಲನೆ ಒಬ್ಬರ ಜೀವವನ್ನಷ್ಟೇ ಅಲ್ಲ, ಒಂದು ಇಡೀ ಕುಟುಂಬದ ಭರವಸೆಯನ್ನೇ ಕಸಿದುಕೊಳ್ಳುತ್ತದೆ” ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.

WhatsApp Group Join Now

Spread the love

Leave a Reply