ಹುಟ್ಟಿದ ನಾಲ್ಕನೇ ಮಗುವೂ ಹೆಣ್ಣು- ಕತ್ತು ಹಿಸುಕಿ ಕೊಂದೇ ಬಿಟ್ಟಳು ಪಾಪಿ ತಾಯಿ!

Spread the love

ಜನಿಸಿದ ನಾಲ್ಕನೇ ಮಗು ಕೂಡ ಹೆಣ್ಣಾಯಿತು (Girl) ಎಂದು ಪಾಪಿ ತಾಯಿಯೊಬ್ಬಳು ನೀಚ ಕೃತ್ಯ ಎಸಗಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಅಶ್ವಿನಿ ಹಳಕಟ್ಟಿ ಎಂದು ಗುರುತಿಸಲಾಗಿದೆ.

ಈಕೆ ಹೆಣ್ಣುಮಗು ಜನಿಸಿದ್ದಕ್ಕೆ ಕತ್ತು ಹಿಸುಕಿ 3 ದಿನದ ಹಸುಗೂಸನ್ನು ಕ್ರೂರವಾಗಿ ಕೊಲೆ ಮಾಡಿದ್ದಾಳೆ.

ನಡೆದಿದ್ದೇನು?

WhatsApp Group Join Now

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಮೂಲದ ಅಶ್ವಿನಿ ಹಳಕಟ್ಟಿಗೆ ಈಗಾಗಲೇ ಮೂವರು ಹೆಣ್ಣುಮಕ್ಕಳಿದ್ದು, ಗಂಡು ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ನ.23 ರಂದು ಮುದಕವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಶ್ವಿನಿ ಮತ್ತೆ ಹೆಣ್ಣು ಮಗುವಿಗೆ ಜನ್ಮನೀಡಿದ್ದಾಳೆ.

ಮಗು ಜನಿಸಿದ ಮಾರನೇ ದಿನ ಅಶ್ವಿನಿ ತವರುಮನೆ ಹಿರೇಮುಲಂಗಿಗೆ ಬಂದಿದ್ದಾಳೆ. ಇಂದು ಬೆಳಗ್ಗೆ ತಾಯಿ ಹೊರ ಹೋದಾಗ ಹಸುಗೂಸಿನ ಕತ್ತು ಹಿಸುಕಿ ಅಶ್ವಿನಿ ಹತ್ಯೆ ಮಾಡಿದ್ದಾಳೆ. ಅಷ್ಟೇ ಅಲ್ಲದೆ ಮಗು ಉಸಿರಾಡುತ್ತಿಲ್ಲ ಅಂತಾ ಹೈಡ್ರಾಮಾ ಸೃಷ್ಟಿಸಿದ್ದಾಳೆ.

ಇದರಿಂದ ಗಾಬರಿಗೊಂಡ ಮನೆಮಂದಿ ಕೂಡಲೇ ಮಗುವನ್ನು ರಾಮದುರ್ಗ ತಾಲೂಕಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ವೈದ್ಯರು, ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ವೇಳೆ ಅಶ್ವಿನಿಯ ನಾಟಕ ಬಯಲಾಗಿದೆ. ಸದ್ಯ ಬಾಣಂತಿ ಹಿನ್ನೆಲೆ ಪೊಲೀಸ್ ಕಾವಲಿನಲ್ಲಿ ಅಶ್ವಿನಿಗೆ ರಾಮದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಆರೈಕೆ ಮಾಡುತ್ತಿದ್ದಾರೆ.

ಇನ್ನು ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ ಚಿದಂಬರ ಮಡಿವಾಳರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸುರೇಬಾನ ಪೊಲೀಸ್ ಠಾಣೆಯಲ್ಲಿ ತಾಯಿ ವಿರುದ್ಧ ಕೊಲೆ ಕೇಸ್ ದಾಖಲಾಗಿದ್ದು, ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ವ್ಯಕ್ತಿಯ ಕೊಲೆ: ಬೆಂಗಳೂರಲ್ಲಿ ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೋರ್ವನಿಗೆ ಮನಬಂದಂತೆ ಥಳಿಸಿ ಕೊಲೆ ಮಾಡಿರುವ ಘಟನೆ ಯಶವಂತಪುರದ ಮುತ್ಯಾಲಮ್ಮನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನರಸಿಂಹರಾಜು (32) ಎಂದು ಗುರುತಿಸಲಾಗಿದೆ.

ಮೃತ ವ್ಯಕ್ತಿ ವಿವಾಹಿತ ಮಹಿಳೆಯೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಅಲ್ಲದೇ ಮನೆಯಲ್ಲಿ ಯಾರು ಇಲ್ಲದಿದ್ದಾಗ ಆಗಾಗ ಮನೆಗೆ ಬರುತ್ತಿದ್ದ. ಅಷ್ಟೇ ಅಲ್ಲದೆ ಮಹಿಳೆಯನ್ನು ಕೂಡ ಆಗಾಗ ಮೃತ ನರಸಿಂಹರಾಜು ತನ್ನ ಮನೆಗೆ ಕರೆಸಿಕೊಳ್ಳುತ್ತಿದ್ದ ಎಂದು ಆರೋಪಿಸಲಾಗಿದೆ. ಆದರೆ ಕಳೆದ ಶನಿವಾರ ಮಹಿಳೆ ನರಸಿಂಹರಾಜ ಮನೆಗೆ ಬಂದಿದ್ದಳು. ಈ ಬಗ್ಗೆ ತಿಳಿದ ಆಕೆಯ ಕುಟುಂಬಸರು ಮಹಿಳೆಯನ್ನು ಹುಡುಕಿಕೊಂಡು ಬಂದಿದ್ದಾರೆ.

ಈ ವೇಳೆ ಇಬ್ಬರೂ ಕೂಡ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಇದರಿಂದ ಸಿಟ್ಟಾದ ಮಹಿಳೆಯ ಮನೆಯವರು ನರಸಿಂಹರಾಜುವನ್ನು ಮನೆಯಿಂದ ಎಳೆದುಕೊಂಡು ಬಂದು ರಸ್ತೆಗೆ ಹಾಕಿ ನಾಲೈದು ಜನ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಇದನ್ನು ಬಿಡಿಸಲು ಓಡೋಡಿ ಬಂದ ನರಸಿಂಹ ಅವರ ತಾಯಿಯ ಮೇಲೆ ಕೂಡ ಹಲ್ಲೆ ನಡೆಸಲಾಗಿದೆ. ತೀವ್ರ ಹಲ್ಲೆಯಿಂದ ಅಸ್ವಸ್ಥನಾಗಿದ್ದ ನರಸಿಂಹರಾಜುವನ್ನು ಸ್ಥಳೀಯರು ಕೆಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಈ ವೇಳೆ ವೈದ್ಯರು ಪರೀಕ್ಷಿಸಿದಾಗ ನರಸಿಂಹರಾಜು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.


Spread the love

Leave a Reply