HSRP: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ

Spread the love

ರಾಜ್ಯದಲ್ಲಿ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸುವ ವಿಚಾರದಲ್ಲಿ ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲಕ್ಕೆ ಸಾರಿಗೆ ಇಲಾಖೆ ತೆರೆ ಎಳೆದಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿದ್ದು, ಈ ನಿಯಮದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಮಾಧ್ಯಮ ವರದಿಗಳು ತಪ್ಪು

ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯವಲ್ಲ ಅಥವಾ ನಿಯಮ ಸಡಿಲಿಕೆಯಾಗಿದೆ ಎಂಬ ಸುದ್ದಿಗಳು ಪ್ರಕಟವಾಗಿದ್ದವು. ಈ ವರದಿಗಳನ್ನು ಸಾರಿಗೆ ಇಲಾಖೆ ತಳ್ಳಿಹಾಕಿದ್ದು, ಇವು ಸತ್ಯಕ್ಕೆ ದೂರವಾದವು ಎಂದು ಹೇಳಿದೆ. ಕೇಂದ್ರ ಸರ್ಕಾರದ ಅಧಿಸೂಚನೆಯಂತೆ ಈ ನಿಯಮ ಜಾರಿಯಲ್ಲಿದ್ದು, ವಾಹನ ಸವಾರರು ಕಡ್ಡಾಯವಾಗಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಿದೆ.

ನ್ಯಾಯಾಲಯದ ಆದೇಶವೇನು?

ಕರ್ನಾಟಕ ಹೈಕೋರ್ಟ್ ಈ ವಿಷಯಕ್ಕೆ ಸಂಬಂಧಿಸಿದಂತೆ ಕೇವಲ ‘ಬಲವಂತದ ಕ್ರಮ’ ಅಂದರೆ ದಂಡ ವಿಧಿಸುವುದಕ್ಕೆ ಸದ್ಯಕ್ಕೆ ತಡೆ ನೀಡಿದೆಯೇ ಹೊರತು, ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು ಎಂಬ ಮೂಲ ನಿಯಮಕ್ಕೆ ತಡೆ ನೀಡಿಲ್ಲ. ನಿಯಮವು ಕಾನೂನುಬದ್ಧವಾಗಿಯೇ ಮುಂದುವರಿದಿದೆ ಎಂದು ಇಲಾಖೆ ವಿವರಣೆ ನೀಡಿದೆ. ವಾಹನಗಳ ಸುರಕ್ಷತೆ ಮತ್ತು ಏಕರೂಪದ ನೋಂದಣಿ ವ್ಯವಸ್ಥೆಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಆದ್ದರಿಂದ ವಾಹನ ಮಾಲೀಕರು ವಿಳಂಬ ಮಾಡದೆ ಅಧಿಕೃತ ಡೀಲರ್‌ಗಳ ಮೂಲಕ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸಾರ್ವಜನಿಕರಲ್ಲಿ ವಿನಂತಿಸಿದೆ.

ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಇಂತಹ ಸುದ್ದಿಗಳು ಸತ್ಯಕ್ಕೆ ದೂರವಾಗಿದ್ದು, ವಾಹನ ಮಾಲೀಕರು ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲೇಬೇಕು ಎಂದು ಇಲಾಖೆ ಸ್ಪಷ್ಟಪಡಿಸಿದೆ. ಇತ್ತೀಚೆಗೆ ಕೆಲವು ಟಿವಿ ಮತ್ತು ಮಾಧ್ಯಮಗಳಲ್ಲಿ ಎಚ್‌ಎಸ್‌ಆರ್‌ಪಿ ಕಡ್ಡಾಯವಲ್ಲ ಎಂಬ ಸುದ್ದಿಗಳು ಪ್ರಸಾರವಾಗಿದ್ದವು. ಇದು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿತ್ತು. ಈ ಹಿನ್ನೆಲೆಯಲ್ಲಿ ಸಾರಿಗೆ ಆಯುಕ್ತರ ಕಚೇರಿಯಿಂದ ಅಧಿಕೃತ ಸ್ಪಷ್ಟನೆ ಹೊರಬಿದ್ದಿದೆ.

ಕೇಂದ್ರ ಮೋಟಾರು ವಾಹನಗಳ ನಿಯಮ 1989ರ ನಿಯಮ 50ರ ಅಡಿಯಲ್ಲಿ 2019ಕ್ಕಿಂತ ಮುಂಚಿತವಾಗಿ ನೋಂದಣಿಯಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ 2018ರಲ್ಲೇ ಅಧಿಸೂಚನೆ ಹೊರಡಿಸಿದೆ. ಇದರನ್ವಯ ಕರ್ನಾಟಕ ಸರ್ಕಾರವು 17-08-2023ರಂದು ಕಡ್ಡಾಯ ಅಳವಡಿಕೆಗೆ ಆದೇಶಿಸಿದೆ. ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಸಂಬಂಧಿಸಿದಂತೆ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯವು ಯಾವುದೇ ತಡೆಯಾಜ್ಞೆ ನೀಡಿಲ್ಲ. ಕೇವಲ “ರಾಜ್ಯ ಸರ್ಕಾರವು ಈ ಬಗ್ಗೆ ಯಾವುದೇ ತರಾತುರಿಯ ಅಥವಾ ಕಠಿಣ ಕ್ರಮಗಳನ್ನು ಸದ್ಯಕ್ಕೆ ಕೈಗೊಳ್ಳಬಾರದು” ಎಂದು ಹೇಳಿದೆಯೇ ಹೊರತು, ನಿಯಮವನ್ನೇ ರದ್ದುಗೊಳಿಸಿಲ್ಲ ಎಂದು ಸ್ಪಷ್ಟಪಡಿಸಿದೆ.

ಎಚ್‌ಎಸ್‌ಆರ್‌ಪಿ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿರುವ ಮೂಲ ಅಧಿಸೂಚನೆಗೆ ನ್ಯಾಯಾಲಯ ಯಾವುದೇ ತಡೆ ನೀಡಿಲ್ಲ. ಆದ್ದರಿಂದ ಸಾರ್ವಜನಿಕರು ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳುವುದು ಕಾನೂನುಬದ್ಧವಾಗಿ ಕಡ್ಡಾಯವಾಗಿದೆ. ಕೆಲವು ಮಾಧ್ಯಮಗಳಲ್ಲಿ ಎಚ್‌ಎಸ್‌ಆರ್‌ಪಿ ಕಡ್ಡಾಯವಲ್ಲ ಎಂಬ ಸುದ್ದಿಗಳು ಪ್ರಸಾರವಾಗುತ್ತಿರುವುದು ಸತ್ಯಕ್ಕೆ ದೂರವಾಗಿದೆ. ಸಾರ್ವಜನಿಕರು ಇಂತಹ ತಪ್ಪು ಮಾಹಿತಿಗಳಿಗೆ ಕಿವಿಗೊಡಬಾರದು ಎಂದು ಅಪರ ಸಾರಿಗೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now

Spread the love

Leave a Reply