ಮೈಸೂರು ಸ್ಫೋಟಕ್ಕೆ ಮತ್ತಿಬ್ಬರು ಬಲಿ : ತಂಗಿಯ ಸಾವಿನ ಸುದ್ದಿ ಕೇಳಿ ಅಣ್ಣನೂ ಸಾವು.! ಕುಟುಂಬಸ್ಥರ ಆಕ್ರಂದನ

Spread the love

ಮೈಸೂರು ಅರಮನೆ ಮುಂಭಾಗ ನಡೆದ ಹಿಲಿಯಂ ಸಿಲಿಂಡರ್ ಸ್ಪೋಟದಲ್ಲಿ ಗಂಭೀರ ಗಾಯಗೊಂಡಿದ್ದ ಹೂವಿನ ವ್ಯಾಪಾರಿ ಮಂಜುಳಾ ಚಿತಿತ್ಸೆ ಫಲಕಾರಿಯಾಗದೆ  ಮೃತಪಟ್ಟಿದ್ದು, ಇದೀಗ ಈ ವಿಷಯ ಕೇಳಿದ ಅವರ ಸಹೋದರ ಕೂಡ ಇಂದು ಸಾವನ್ನಪ್ಪಿದ್ದಾರೆ.

ಹೀಲಿಯಂ ಸಿಲಿಂಡರ್ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಜುಳಾ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ತಂಗಿಯ ಸಾವಿನ ಸುದ್ದಿ ತಿಳಿದುಕೊಂಡ ಬಳಿಕ ಅವರ ಅಣ್ಣ ಪರಮೇಶ್ವರ್ (60) ಕೂಡ ಇಂದು ನಿಧನರಾಗಿದ್ದಾರೆ.

ನಂಜನಗೂಡು ತಾಲೂಕಿನ ಚಾಮಲಾಪುರದ ನಿವಾಸಿಯಾಗಿರುವ ಪರಮೇಶ್ವರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೈಸೂರು ಅರಮನೆಯಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಚುರುಕುಗೊಳಿಸಲಾಗಿದ್ದು, ಮೃತ ಸಲೀಂ ಬಳಿ ಉತ್ತರ ಪ್ರದೇಶದಲ್ಲಿ 5 ಎಕರೆ ಜಮೀನು ಹೊಂದಿದ್ದ ಎಂದು ತಿಳಿದು ಬಂದಿದೆ.

ಗುರುವಾರ ರಾತ್ರಿ ಸುಮಾರು 8.30ರ ವೇಳೆಗೆ ಉತ್ತರ ಪ್ರದೇಶದ ಸಲೀಂ ಎಂಬವರು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಹೀಲಿಯಂ ಬಲೂನ್‌ಗಳನ್ನು ಮಾರಾಟ ಮಾಡುತ್ತಿದ್ದರು. ಬಲೂನ್‌ಗಳಿಗೆ ಗ್ಯಾಸ್ ತುಂಬಿಸುತ್ತಿದ್ದ ಸಂದರ್ಭದಲ್ಲೇ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ.

ಸ್ಫೋಟಕ ತೀವ್ರತೆಗೆ ಬಲೂನ್ ಬರುತ್ತಿದ್ದ ಸಲೀಂ ಸ್ಥಳದಲ್ಲೇ ಸಾವನ್ನಪ್ಪಿದ್ದ, ಈತನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾದ ಹಿನ್ನಲೆ ಸಲೀಂನ ಹಿನ್ನಲೆಯನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ. ಅದರಂತೆ ಇದೀಗ ಉತ್ತರ ಪ್ರದೇಶದ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

ಕನೋಜ್ ಜಿಲ್ಲೆಯ ತೊಫಿಯಾ ಗ್ರಾಮದ ನಿವಾಸಿಯಾದ ಸಲೀಂ ತನ್ನ ಊರಿನಲ್ಲಿ ಕೃಷಿ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ. ಐದು ಎಕರೆ ಜಮೀನಿನ ಮಾಲೀಕರಾಗಿದ್ದ ಅವರು ಹಲವು ವರ್ಷಗಳಿಂದ ಕೃಷಿಯನ್ನೇ ಜೀವನೋಪಾಯವಾಗಿಸಿಕೊಂಡಿದ್ದರು. ಆದರೆ ಕೃಷಿ ಕೆಲಸವನ್ನು ಬಿಟ್ಟು ಸುಮಾರು ಒಂದು ತಿಂಗಳ ಹಿಂದೆ ಸಲೀಂ ಮೈಸೂರಿಗೆ ಬಂದಿದ್ದರು.

ಕೃಷಿ ವೃತ್ತಿಯನ್ನು ತೊರೆದು ಮೈಸೂರಿಗೆ ಬಲೂನ್ ಮಾರಾಟಕ್ಕೆ ಸಲೀಂ ಬಂದಿರುವುದಕ್ಕೆ ಕಾರಣವೇನು ಎಂಬುದರ ಬಗ್ಗೆ ಪೊಲೀಸರು ಇದೀಗ ಅವರ ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಐದು ಎಕರೆ ಜಮೀನು ಇದ್ದರೂ ಬಲೂನ್ ವ್ಯಾಪಾರಕ್ಕೆ ಇಳಿದಿರುವ ಹಿನ್ನಲೆ ಏನು? ಅದರಲ್ಲೂ ಮೈಸೂರಿನಲ್ಲೇ ಮಾರಾಟ ಆರಂಭಿಸಿದ ಕಾರಣವೇನು ಎಂಬ ಪ್ರಶ್ನೆಗಳಿಗೆ ಇನ್ನೂ ಸ್ಪಷ್ಟ ಉತ್ತರ ಸಿಗಬೇಕಿದೆ.

WhatsApp Group Join Now

Spread the love

Leave a Reply