ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಸದಸ್ಯತ್ವ ರದ್ದಾಗಿದೆ .ಹೌದು, ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈ ಆದೇಶದ ಬೆನ್ನಲ್ಲೇ ಧಾರವಾಡ ವಿಧಾನಸಭಾ ಕ್ಷೇತ್ರವು ಅಧಿಕೃತವಾಗಿ ತೆರವಾಗಿದೆ.
ಅನರ್ಹತೆಗೆ ಕಾರಣ: ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಹೀಗಾಗಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ವಿಶೇಷ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದ ದಿನವಾದ ಏಪ್ರಿಲ್ 15, 2026 ರಿಂದಲೇ ಜಾರಿಗೆ ಬರುವಂತೆ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಲಾಗಿದೆ.
ಕಾನೂನು ಕ್ರಮ: ಭಾರತ ಸಂವಿಧಾನದ ಅನುಚ್ಛೇದ 191(1)(e) ಹಾಗೂ ಪ್ರಜಾಪ್ರತಿನಿಧಿಗಳ ಕಾಯ್ದೆ 1951ರ ಸೆಕ್ಷನ್ 8ರ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಈ ಕಾಯ್ದೆಯ ಪ್ರಕಾರ ಯಾವುದೇ ಜನಪ್ರತಿನಿಧಿಗೆ 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಶಿಕ್ಷೆಯಾದರೆ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ಅನರ್ಹರಾಗುತ್ತಾರೆ.
ಚುನಾವಣಾ ಸ್ಪರ್ಧೆಗೆ ನಿಷೇಧ: ಒಂದು ವೇಳೆ ಮೇಲ್ಮನವಿ ಸಲ್ಲಿಸಿ ನ್ಯಾಯಾಲಯದಿಂದ ಶಿಕ್ಷೆಗೆ ತಡೆಯಾಜ್ಞೆ ಸಿಗದೇ ಇದ್ದರೆ ಅಥವಾ ಶಿಕ್ಷೆ ರದ್ದಾಗದೇ ಇದ್ದಲ್ಲಿ, ಅವರು ಜೈಲಿನಿಂದ ಬಿಡುಗಡೆಯಾದ ನಂತರವೂ ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.
ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದುಗೊಳಿಸಿ ಆದೇಶ
WhatsApp Group
Join Now