RSS ನ್ನು ಈಗಾಗಲೇ ಮೂರು ಬಾರಿ ನಿಷೇಧ ಮಾಡಿದ್ದೇವೆ. ಇದೀಗ ನಮ್ಮ ಮುಂದಿನ ಹೋರಾಟ ಅದೇ ಆಗಿದೆ : ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌

Spread the love

ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಈಗಾಗಲೇ ಮೂರು ಬಾರಿ ನಿಷೇಧ ಮಾಡಿದ್ದೇವೆ. ಇದೀಗ ನಮ್ಮ ಮುಂದಿನ ಹೋರಾಟ ಅದೇ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಹೇಳಿದರು.

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರ್‌ಎಸ್‌ಎಸ್‌ ಟೀಕೆ ಮಾತನಾಡುತ್ತಿದ್ದಾರೆ ಎಂದು, ಜನರ ಗಮನ ಬೆರೆಡೆ ಸೆಳೆಯಲು ಬಿಜೆಪಿ ಭೂ ಹಗರಣದಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಭಾಗಿಯಾಗಿದ್ದಾರೆಂದು ಆರೋಪಿಸುತ್ತಿದೆ ಎಂದರು.

‘ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ₹ 4 ಸಾವಿರ ಕೋಟಿ ಹಣ ಸಂಗ್ರಹಿಸಿದೆ. ನಮ್ಮ ಖಜಾನೆಯಲ್ಲಿ ಇರುವುದು ಕೇವಲ ₹700 ಕೋಟಿ. ನಮ್ಮದು ಬಡವರ ಪಕ್ಷವಾಗಿದ್ದು, ಚೆಕ್‌ ಮೂಲಕವೇ ವ್ಯವಹಾರ ನಡೆಯುತ್ತಿದೆ. ಬೆಂಗಳೂರಿನಲ್ಲಿ ಚಾಣಕ್ಯ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಬಡ ರೈತರ 106 ಎಕರೆ ಜಮೀನನ್ನು ಕೇವಲ ₹50 ಲಕ್ಷಕ್ಕೆ ಖರೀದಿ ಮಾಡಿದವರ ಬಗ್ಗೆ ನಮಗೆ ಗೊತ್ತಿಲ್ಲವೆ’ ಎಂದು ಪ್ರಶ್ನಿಸಿದರು.

‘ಎಸ್‌ಐಆರ್‌ ಬಗ್ಗೆ ನಮ್ಮ ವಿರೋಧವಿಲ್ಲ. ಆದರೆ, ನಿಜವಾದ ಯಾವೊಬ್ಬ ಮತದಾರನೂ ಪಟ್ಟಿಯಿಂದ ಬಿಟ್ಟುಹೋಗಬಾರದು ಎನ್ನುವುದುದು ನಮ್ಮ ಉದ್ದೇಶ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಚುನಾವಣಾ ಆಯೋಗದ ಮೂಲಕ ತಮ್ಮನ್ನು ವಿರೋಧಿಸುವವರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಷಡ್ಯಂತ್ರ ನಡೆಸುತ್ತಿವೆ. ಈ ನಿಟ್ಟಿನಲ್ಲಿ ನಾವು ವಿಭಾಗ ಮಟ್ಟದಲ್ಲಿ ಜಾಗೃತಿ ಸಮಾವೇಶ ನಡೆಸುತ್ತಿದ್ದೇವೆ’ ಎಂದು ಹೇಳಿದರು.

‘ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವುದೇ ಗೊಂದಲವಿಲ್ಲ. ಆದರೆ, ನಾವು ಸದ್ಯ ಎಸ್‌ಐಆರ್‌ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ನಿರತರಾಗಿದ್ದೇವೆ. ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಉಪ ಚುನಾವಣೆಗಳು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಪಕ್ಷದ ನೇತೃತ್ವದಲ್ಲಿ ನಡೆಯುತ್ತದೆ’ ಎಂದರು.

WhatsApp Group Join Now

Spread the love

Leave a Reply